ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆನೇಕಲ್ ನಿವಾಸಿ ಆರ್.ಆಕರ್ಷ್(22) ಮೃತ ವಿದ್ಯಾರ್ಥಿ. ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಆಕರ್ಷ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳ ಅಥವಾ ಆಕರ್ಷ್‌ನ ಮೊಬೈಲ್‌ನಲ್ಲಿ ಯಾವುದೇ ಮರಣ ಪತ್ರ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಆಕರ್ಷ್ ಬಿಎಂಎಸ್ ಕಾಲೇಜಿನಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ಕೋರ್ಸ್‌ನ 7ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಶನಿವಾರ ಬೆಳಗ್ಗೆ ಎಂದಿನಂತೆ ಆನೇಕಲ್‌ನಿಂದ ಕಾಲೇಜಿಗೆ ಬಂದಿದ್ದ ಆಕರ್ಷ್, ಮಧ್ಯಾಹ್ನ ಇಂಟರ್‌ನಲ್ ಪರೀಕ್ಷೆಗೆ ಹಾಜರಾಗಿದ್ದ. ಆದರೆ, ಸಂಜೆ ಸುಮಾರು 5 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹನುಮಂತನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆಕರ್ಷ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಿಯಕರನೊಂದಿಗೆ ಹೊಸ ವರ್ಷಾಚರಣೆಗೆ ಹೋದವಳ ಹತ್ಯೆ: ಆತ್ಮಹತ್ಯೆ ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್