ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ನಗರದಾದ್ಯಂತ ಇಂದು ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಶಾಲಾ ವಾಹನ ಚಾಲಕರ ವಿರುದ್ಧ ಇತ್ತೀಚಿನ ದಿನಗಳಲ್ಲಿ ಕೆಲ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ
ಇಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
3,016 ವಾಹನಗಳನ್ನು ತಪಾಸಣೆಗೊಳಪಡಿಸಲಾಗಿದೆ. ಈ ವೇಳೆ ಪಾನಮತ್ತರಾಗಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ಜನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಆರೋಪಿತ ಚಾಲಕರ ಚಾಲನಾ ಪರವಾನಗಿಯನ್ನು ಅಮಾನತ್ತುಗೊಳಿಸುವಂತೆ ಸಂಬಂಧಪಟ್ಟ ಆರ್.ಟಿ.ಓ ಕಚೇರಿಗಳಿಗೆ ವರದಿ ನೀಡಲಾಗಿದೆ. ಇದೇ ವೇಳೆ ಚಾಲನಾ ಕ್ಷಮತೆಯಿರದ 11 ವಾಹನಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟ ಆರ್.ಟಿ.ಓ ಅಧಿಕಾರಿಗಳ ವಶಕ್ಕೊಪ್ಪಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ; ಆರೋಪಿ ಕಾಲಿಗೆ ಗುಂಡೇಟು - Shivamogga Police Shootout