ETV Bharat / state

ಪೋಕ್ಸೋ ಕೇಸ್​: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ - POCSO CASE

author img

By ETV Bharat Karnataka Team

Published : Jun 13, 2024, 5:05 PM IST

Updated : Jun 13, 2024, 5:18 PM IST

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್​
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್​ (ETV Bharat)

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸ್ಥಳೀಯ ಗುರುವಾರ ಕೋರ್ಟ್​ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ನ್ಯಾಯಾಲಯದ ಈ ಆದೇಶದಿಂದ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.

ಬಂಧನ ಭೀತಿ ಹಿನ್ನೆಲೆ ಮಾಜಿ ಸಿಎಂ ಬಿಎಸ್​ವೈ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಯುವ ಮುನ್ನವೇ, ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಪ್ರಕರಣ ಸಂಬಂಧ ಮಾಜಿ ಸಿಎಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಕೋರ್ಟ್​, ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿತು.

ಪ್ರಕರಣದ ವಿಚಾರಣೆ ವೇಳೆ ಸಿಐಡಿ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಅಶೋಕ ನಾಯಕ್, ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರಿಗೆ ಹಲವು ಕಾನೂನಾತ್ಮಕ ಅಡಚಣೆಗಳಿವೆ. ವಿಚಾರಣೆಗೆ ಕರೆದರೆ ಸಮಯ ಕೋರುತ್ತಿದ್ದಾರೆ. ನೋಟಿಸ್‌ಗಳನ್ನು ಕಡೆಗಣಿಸುತ್ತಿದ್ದಾರೆ. ವಾಸ್ತವದಲ್ಲಿ ಸಂತ್ರಸ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಕಾರಣಕ್ಕಾಗಿ ಅವರ ತಾಯಿ ಕಾನೂನು ನೆರವು ಕೋರಿ ಇವರ ಬಳಿ ಬಂದಿದ್ದರು. ಇವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ದಸ್ತಗಿರಿ ಮಾಡೋದಕ್ಕೆ ಕಷ್ಟವಿದೆ. ಇವರ ಒಬ್ಬ ಮಗ ಸಂಸದ ಮತ್ತೊಬ್ಬ ಮಗ ಶಾಸಕ ಮತ್ತು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರನ್ನು ವಿಚಾರಣೆಗೆ ಕರೆಯಿಸಿ ತನಿಖೆ ಪೂರೈಸುವುದೇ ಕಷ್ಟವಾಗಿದೆ ಎಂದರು.

ಆರೋಪಿಯು ಯಾವುದೇ ಒತ್ತಡ ಮತ್ತು ಬೆದರಿಕೆ ಉಂಟು ಮಾಡಿ ಘಟನೆಯ ಸತ್ಯಾಂಶ ಹೊರಬಾರದ ರೀತಿಯಲ್ಲಿ ನೋಡಿಕೊಳ್ಳುವ ಸಾಧ್ಯತೆಗಳಿವೆ. ತಮ್ಮ ರಾಜಕೀಯ ಮತ್ತು ಹಣದ ಬಲದಿಂದ ಕುಟುಂಬದ ಸದಸ್ಯರ ಸ್ಥಾನಮಾನಗಳ ಪ್ರಭಾವದಿಂದ ಕಾನೂನು ಕೈಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವ ಎಲ್ಲ ಸಂಭವಗಳಿವೆ. ಏತನ್ಮಧ್ಯೆ ತನಿಖಾಧಿಕಾರಿಗಳ ಬಳಿ ಸಾಕಷ್ಟು ಸಾಕ್ಷ್ಯಗಳಿವೆ. ಮೇಲ್ನೋಟಕ್ಕೆ ಈಗಾಗಲೇ ಶೇ 80ರಷ್ಟು ತನಿಖೆ ಪೂರ್ಣಗೊಂಡಿದೆ. ಇನ್ನುಳಿದ ದಾಖಲೆಗಳ ಶೋಧ ನಡೆಸಬೇಕಿದ್ದು ಆರೋಪಿಯ ವಿವರಣೆ ಪಡೆಯಬೇಕಿದೆ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024 ರ ಮಾರ್ಚ್ 3 ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಗಂಭೀರತೆ ಪರಿಗಣಿಸಿದ್ದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಇತ್ತೀಚೆಗೆ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಎರಡನೇ ಬಾರಿ ಸೂಚನೆ ನೀಡಿದ್ದರು. ಆದರೆ, ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದರು. ಇದರಿಂದ ತನಿಖಾಧಿಕಾರಿಗಳು ಬಂಧನ ವಾರೆಂಟ್ ಜಾರಿ ಮಾಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ನಿರೀಕ್ಷಣಾ ಜಾಮೀನಿಗೆ ಅರ್ಜಿ: ಇತ್ತ, ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು(ಗುರುವಾರ) ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ವಿರೋಧ ಪಕ್ಷದ ಕೆಲ ರಾಜಕೀಯ ಮುಖಂಡರು ದೊಡ್ಡಮಟ್ಟದ ಸಂಚು ರೂಪಿಸಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ತನ್ನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿ ಘನತೆಗೆ ಧಕ್ಕೆ ತರುವ ಕಾರ್ಯ ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಅವರು ತಿಳಿಸಿದ್ದಾರೆ. ಈಗಾಗಲೇ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಾಗಿದೆ. ಮತ್ತೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಒಂದು ದಿನ ಮಾತ್ರ ಕಾಲಾವಕಾಶ ನೀಡಲಾಗಿದೆ. ಆದರೆ, ಮಾಜಿ ಸಿಎಂ ಸಭೆಯೊಂದರಲ್ಲಿ ಭಾಗಿಯಾಗಲು ದೆಹಲಿಯಲ್ಲಿ ಉಳಿದಿದ್ದಾರೆ. ಹೀಗಾಗಿ ಜೂನ್ 12ರ ಬದಲಿಗೆ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ - BSY POCSO CASE

Last Updated : Jun 13, 2024, 5:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.