ETV Bharat / state

ಜಯಲಲಿತಾರ ಚಿನ್ನಾಭರಣ ಪಡೆಯಲು 6 ಟ್ರಂಕ್​ಗಳೊಂದಿಗೆ ಬರುವಂತೆ ತಮಿಳುನಾಡು ಸರ್ಕಾರಕ್ಕೆ ಕೋರ್ಟ್​ ಸೂಚನೆ - ತಮಿಳುನಾಡು ಸರ್ಕಾರ

ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲು ಬೆಂಗಳೂರು ಕೋರ್ಟ್​ ದಿನಾಂಕ ನಿಗದಿಪಡಿಸಿದೆ.

jayalalitha-gold-jewelery
ಜಯಲಲಿತಾ ಚಿನ್ನಾಭರಣ
author img

By ETV Bharat Karnataka Team

Published : Feb 19, 2024, 7:48 PM IST

Updated : Feb 21, 2024, 12:03 PM IST

ಬೆಂಗಳೂರು : ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ.

ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶರು, 2024ರ ಮಾರ್ಚ್​ 6 ಮತ್ತು 7ರಂದು ದಿನಾಂಕವನ್ನು ನಿಗದಿಪಡಿಸಿದ್ದು, ಆ ಎರಡು ದಿನಗಳಂದು ಇತರೆ ಪ್ರಕರಣಗಳ ವಿಚಾರಣೆ ನಡೆಸದಿರಲು ನಿರ್ಧರಿಸಿದ್ದಾರೆ.

ಅಲ್ಲದೆ, ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿದ್ದು, ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಐಜಿಪಿ ಅವರೊಂದಿಗೆ ಬರಬೇಕು. ಈ ವೇಳೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್​ ಮತ್ತು ಆರು ದೊಡ್ಡ ಪೆಟ್ಟಿಗೆ (ಟ್ರಂಕ್​) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಚಿನ್ನಾಭರಣಗಳನ್ನು ಪಡೆದುಕೊಳ್ಳಬೇಕು. ಈ ಅಂಶವನ್ನು ತಮಿಳುನಾಡು ಡಿವೈಎಸ್​ಪಿ ಅವರು ತಮಿಳುನಾಡು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಅಲ್ಲದೆ, ಈ ಸಂದರ್ಭದಲ್ಲಿ ಸಿವಿಲ್​ ನ್ಯಾಯಾಲಯದಲ್ಲಿ ಎರಡು ದಿನಗಳ ಕಾಲ ಅಗತ್ಯವಿರುವ ಭದ್ರತೆಯನ್ನು ಸ್ಥಳೀಯ ಪೊಲೀಸರಿಂದ ಕಲ್ಪಿಸಲು ನ್ಯಾಯಾಲಯದ ರಿಜಿಸ್ಟ್ರಾರ್​ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು 2024ರ ಮಾರ್ಚ್ 6ಕ್ಕೆ ಮುಂದೂಡಲಾಗಿದೆ.

5 ಕೋಟಿ ಡಿಡಿ ನೀಡಿದ ತಮಿಳುನಾಡು: ಪ್ರಕರಣದ ವಿಚಾರಣೆಗಾಗಿ ಕರ್ನಾಟಕ ಸರ್ಕಾರ ವೆಚ್ಚ ಮಾಡಿದ್ದ 5 ಕೋಟಿ ರೂ.ಗಳ ಡಿಡಿಯನ್ನು ಈಗಾಗಲೇ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ನೀಡಿದೆ. ಆದರೆ, ಇನ್ನೂ ರಾಜ್ಯ ಸರ್ಕಾರದ ಖಾತೆಗೆ ಬರುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಕೀಲರು ಈಟಿವಿ ಭಾರತ್​ಗೆ ಮಾಹಿತಿ ನೀಡಿದರು.

ಏನೆಲ್ಲಾ ವಸ್ತುಗಳಿವೆ?: 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್‌ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಪ್ರಕರಣದ ಹಿನ್ನೆಲೆ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜೊತೆಗೆ, ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಈ ನಡುವೆ ಜೆ. ಜಯಲಿತಾ ಅವರು ಮೃತಪಟ್ಟಿದ್ದರು.

ಆದ್ದರಿಂದ ಜಯಲಲಿತಾರ ಒಡವೆಗಳ ಹಸ್ತಾಂತರ ಕುರಿತು ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕ್ಷೇತ್ರದ ಇವಿಎಂ, ವಿವಿಪ್ಯಾಟ್​ ಲೋಕಸಭೆ ಚುನಾವಣೆಗೆ ಬಳಸಲು ಹೈಕೋರ್ಟ್ ಅನುಮತಿ

Last Updated : Feb 21, 2024, 12:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.