ETV Bharat / state

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆ: ತುಷಾರ್ ಗಿರಿನಾಥ್ - Meeting on Disaster Management - MEETING ON DISASTER MANAGEMENT

ಬೆಂಗಳೂರು ನಗರದಲ್ಲಿ ವಿಪತ್ತು ನಿರ್ವಹಣೆಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಇಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಸಭೆ ನಡೆಯಿತು.

BBMP Chief Commissioner Tushar Girinath spoke in the meeting.
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿದರು. (ETV Bharat)
author img

By ETV Bharat Karnataka Team

Published : May 13, 2024, 8:06 PM IST

Updated : May 13, 2024, 8:22 PM IST

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿದರು. (ETV Bharat)

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲು ವಿಪತ್ತು ನಿರ್ವಹಣೆಗಾಗಿ ಆಯಾ ವಲಯಗಳ ಉಪ ವಿಭಾಗಗಳ ಹಂತದಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಿ ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ನಗರದಲ್ಲಿ ವಿಪತ್ತು ನಿರ್ವಹಣೆಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುವುದು, ಮ್ಯಾನ್ ಹೋಲ್‌ಗಳು ತೆರೆದುಕೊಳ್ಳುವುದು, ಮರ/ವಿದ್ಯುತ್ ಕಂಬಗಳು ಬೀಳುವುದನ್ನು ಹಾಗೂ ಮಳೆಯಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಆಯಾ ವಲಯಗಳ ಉಪ ವಿಭಾಗಗಳಲ್ಲಿ ಪಾಲಿಕೆ, ಜಲಮಂಡಳಿ, ಬೆಸ್ಕಾಂ, ಮೆಟ್ರೋ, ಅಗ್ನಿ ಶಾಮಕ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳನ್ನೊಳನ್ನು ಒಳಗೊಂಡ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜನೆ ಮಾಡಿಕೊಳ್ಳುವಂತೆ ಸೂಚಿಸಿದರು.

ನಗರದಲ್ಲಿ ಕಳೆದ ಒಂದು ವಾರದಿಂದ ಬೇರೆ ಬೇರೆ ಸ್ಥಳಗಳಲ್ಲಿ ಮಳೆಯಾಗುತ್ತಿದ್ದು, ಒಂದು ಕಡೆ ಒಂದೊಂದು ರೀತಿಯಲ್ಲಿ ಮಳೆಯಾಗುತ್ತಿದೆ. ಕೆಲವಡೆ ಸಾಮಾನ್ಯ, ಇನ್ನು ಕೆಲವೆಡೆ ಮಧ್ಯಮ ಹಾಗೂ ಹೆಚ್ಚಾಗಿ ಮಳೆಯಾಗಿರುವ ವರದಿಯಾಗಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸುಮಾರು 150 ಕಡೆ ನೀರು ನಿಂತಿದೆ. ನಿಂತ ನೀರು 2 ಗಂಟೆಯೊಳಗಾಗಿ ಹರಿದುಹೋಗಿದ್ದು, ಯಾವುದೇ ರೀತಿಯ ಸಮಸ್ಯೆಯಾಗಿಲ್ಲ ಎಂದು ಹೇಳಿದರು.

ನಗರದಲ್ಲಿ ಮಳೆ ಪ್ರಾರಂಭವಾದಾಗಿನಿಂದ 325 ಮರಗಳು ಬಿದ್ದಿದ್ದು, ಅದರಲ್ಲಿ 320 ಮರಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೆ 698 ರೆಂಬೆ ಕೊಂಬೆಗಳು ಬಿದ್ದಿದ್ದು ಅವುಗಳನ್ನು ತೆರವುಗೊಳಿಸಲಾಗಿದೆ. ಉಳಿದ ಮರ, ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದರು. ಮಳೆಯಿಂದಾಗಿ ಧರಗುರುಳಿದ ಮರ, ರೆಂಬೆ ಕೊಂಬೆಗಳನ್ನು ತೆರವುಗೊಳಿಸಲು 39 ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಕಟಾವು ಮಾಡಿ ರಸ್ತೆ ಬದಿಗೆ ಹಾಕಿದವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಸೆನ್ಸಾರ್​​​ಗಳ ಮೇಲ್ವಿಚಾರಣೆಯ ಕುರಿತು ವಿವರಣೆ: ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜ ಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಹಾಗೂ ಭಾರತೀಯ ವಿಜ್ಙಾನ ಸಂಸ್ಥೆಯ ಸಹಯೋಗದಲ್ಲಿ ಅಳವಡಿಸಲಾಗಿದೆ. ಅದನ್ನು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್​​​ನಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್​​ ಮಾಧ್ಯಮ ಪ್ರತಿನಿಧಿಗಳನ್ನು ಕರೆದೊಯ್ದು ಅದು ಯಾವ ರೀತಿ ಕಾರ್ಯನಿರ್ವಹಿಸಲಿದೆ ಎಂಬುದರ ಕುರಿತು ವಿವರಣೆ ನೀಡಿದರು.

198ರಲ್ಲಿ 74 ಕಡೆ ಮಾತ್ರ ಶಾಶ್ವತ ಪರಿಹಾರ: ಸಭೆ ನಂತರ ಮಾಧ್ಯಮಗಳೊಂದಿಗೆ ತುಷಾರ್ ಗಿರಿನಾಥ್ ಮಾತನಾಡಿ, ನಗರದಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳಿದ್ದು, ಈ ಪೈಕಿ 124 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಶಾಶ್ವತ ಪರಿಹಾರ ಒದಗಿಸಲಾಗಿದೆ. ಈ 124 ಸ್ಥಳಗಳಿಗೆ ವಲಯ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ ಕೂಡಲೇ ಕಾಮಗಾರಿ ಕೈಗೊಂಡು ಸರಿಪಡಿಸುವ ಕೆಲಸ ಮಾಡಬೇಕು. ಉಳಿದ 74 ಪ್ರದೇಶಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಶೀಘ್ರ ಶಾಶ್ವತ ಪರಿಹಾರ ಕೈಗೊಳ್ಳಲು ಹೇಳಿದರು.

ಹೂಳೆತ್ತಲು ಪ್ರತಿ ವಾರ್ಡ್ ಗೆ 30 ಲಕ್ಷ ರೂ ಮೀಸಲು:ಪಾಲಿಕೆ ವ್ಯಾಪ್ತಿಯಲ್ಲಿ 225 ವಾರ್ಡ್ ಗಳಲ್ಲಿ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತುವ ಸಲುವಾಗಿ ಪ್ರತಿ ವಾರ್ಡ್ ಗೆ ತಲಾ 30 ಲಕ್ಷ ರೂ. ಮೀಸಲಿಡಲಾಗಿದೆ. ಮಳೆಗಾಲದ ವೇಳೆ ಮಳೆ ನೀರು ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಹೂಳೆತ್ತುವ ಕೆಲಸ ಮಾಡಲಾಗುತ್ತಿರುತ್ತದೆ ಎಂದರು.

ವಿಪತ್ತು ನಿರ್ವಹಣೆಗಾಗಿ 10 ಕೋಟಿ ರೂ ಮೀಸಲು: ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಈ ಬಾರಿಯ ಆಯವ್ಯಯದಲ್ಲಿ 10 ಕೋಟಿ ರೂ ಮೀಸಲಿಡಲಾಗಿದೆ. ಮೀಸಲಿಟ್ಟಿರುವ ಅನುದಾನವನ್ನು ಹೊಸದಾಗಿ ಪ್ರವಾಹ ಪೀಡಿತ ಪ್ರದೇಶ ಉಂಟಾಗುವುದು, ಪಂಪ್ ವ್ಯವಸ್ಥೆ ಸೇರಿದಂತೆ ಇನ್ನಿತರ ತುರ್ತು ಸಮಸ್ಯೆಗಳಿಗಾಗಿ ಅನುದಾನ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಮೇಘ ಸಂದೇಶ, ವರುಣ ಮಿತ್ರದಿಂದ ಮಳೆಯ ಮಾಹಿತಿ ಲಭ್ಯ: ಮಳೆ ಬಗ್ಗೆ ನಾಗರಿಕರಿಗೆ ಅಗತ್ಯ ಮಾಹಿತಿಯನ್ನು ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯ ವತಿಯಿಂದ "ಬೆಂಗಳೂರು ಮೇಘ ಸಂದೇಶ" ಮೊಬೈಲ್ ಆಪ್ ಬಿಡುಗಡೆ ಗೊಳಿಸಲಾಗಿದೆ. ಅದಲ್ಲದೆ "ವರುಣಮಿತ್ರ" ಅಂತರ್ಜಾಲ ತಾಣದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಉಂಟಾಗುವ ಪ್ರವಾಹವನ್ನು ತಡೆಯಲು ವಲಯವಾರು ನಕ್ಷೆ, ಮಳೆ ಮುನ್ಸೂಚನೆ, ಪ್ರವಾಹ ಮುನ್ಸೂಚನೆ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಈ ವೇಳೆ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಡಾ.ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ ಕಲಕೇರಿ, ವಲಯ ಆಯುಕ್ತ ಡಾ. ಆರ್.ಎಲ್ ದೀಪಕ್, ವಿನೊತ್ ಪ್ರಿಯಾ, ರಮೇಶ್, ಶಿವನಾಂದ್ ಕಪಾಶಿ, ಸ್ನೇಹಲ್, ರಮ್ಯಾ, ಪ್ರೀತಿ ಗೆಹ್ಲೋಟ್ ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ:ಬೆಂಗಳೂರು: ತೆರಿಗೆ ಹಣ ಬಾಕಿ, ಮಂತ್ರಿ ಮಾಲ್​ಗೆ ಬಿಬಿಎಂಪಿಯಿಂದ ಮತ್ತೆ ಬೀಗ - Mantri Mall Closed

Last Updated : May 13, 2024, 8:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.