ETV Bharat / state

ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ವಿಧಿವಶ; ನಾಳೆ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ - EX CM SM KRISHNA

ಕರ್ನಾಟಕ ರಾಜಕಾರಣದ ಮುತ್ಸದ್ಧಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ ನಿಧನರಾದರು.

EX CM SM KRISHNA
ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ (ಸಂಗ್ರಹ ಚಿತ್ರ) (Getty Images)
author img

By ETV Bharat Karnataka Team

Published : Dec 10, 2024, 8:01 AM IST

Updated : Dec 10, 2024, 9:33 AM IST

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲರಾಗಿದ್ದ ಎಸ್‌. ಎಂ. (ಸೋಮನಹಳ್ಳಿ ಮಲ್ಲಯ್ಯ) ಕೃಷ್ಣ ಅವರು ಇಂದು ಬೆಳಗಿನಜಾವ 2.30 ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಂಗಳವಾರ ಬೆಳಗಿನಜಾವ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ, ತಕ್ಷಣ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿ ತಪಾಸಣೆ ನಡೆಸಿದ್ದರು. ನಂತರ ಎಸ್‌. ಎಂ. ಕೃಷ್ಣ ಅವರು ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದರು.

ಸದಾಶಿವಗರದ ಕೃಷ್ಣ ಅವರ ನಿವಾಸದ ಆವರಣದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಸ್ಥಳಕ್ಕೆ ಆಗಮಿಸಿ ಭದ್ರತೆ ಕುರಿತು ಪರಿಶೀಲನೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ವಿಧಿವಶ (ETV Bharat)

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿ ಆಗಿರುವ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

''ಮುತ್ಸದ್ಧಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುವಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ'' ಎಂದು ಮುಖ್ಯಮಂತ್ರಿಗಳ ಅಧಿಕೃತ ಕಚೇರಿಯು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದೆ.

“ನಾಯಕತ್ವ ಮತ್ತು ಸಾರ್ವಜನಿಕ ಸೇವೆಯ ಪರಂಪರೆ ನಮ್ಮ ರಾಜ್ಯ ಮತ್ತು ರಾಷ್ಟ್ರದ ಮೇಲೆ ಅಳಿಸಲಾಗದ ಛಾಪು ಮೂಡಿಸಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ಅವರ ನಿಧನದಿಂದ ತೀವ್ರ ದುಃಖವಾಗಿದೆ“ ಎಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೂಡ ತಮ್ಮ ಎಕ್ಸ್​ ಖಾತೆಯಲ್ಲಿ ಎಸ್. ಎಂ. ಕೃಷ್ಣ ಅವರ ನಿಧನ ಬಗ್ಗೆ ಪೋಸ್ಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಎಸ್.ಎಂ.ಕೃಷ್ಣ, ಎಂ.ಆರ್.ಸೀತಾರಾಮ್ ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್​

Last Updated : Dec 10, 2024, 9:33 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.