ETV Bharat / state

ಬೆಂಗಳೂರು: ಜಿಕೆವಿಕೆಯಲ್ಲಿ ನ.14 ರಿಂದ 4 ದಿನಗಳ ಕಾಲ ಕೃಷಿಮೇಳ - KRISHIMELA

ಬೆಂಗಳೂರಿನ ಜಿಕೆವಿಕೆಯಲ್ಲಿ ನವೆಂಬರ್ 14 ರಿಂದ 17ರ ವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ.

ಬೆಂಗಳೂರು ಕೃಷಿಮೇಳ Krishimela
ಬೆಂಗಳೂರು ಕೃಷಿ ವಿವಿ ಕುಲಪತಿ ಪತ್ರಿಕಾಗೋಷ್ಠಿ (ETV Bharat)
author img

By ETV Bharat Karnataka Team

Published : Nov 12, 2024, 7:50 PM IST

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯು ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ನ.14 ರಿಂದ 17ರ ವರೆಗೆ ನಾಲ್ಕು ದಿನಗಳ ಕಾಲ ಹವಾಮಾನ ಚತುರ ಘೋಷ ವಾಕ್ಯದೊಂದಿಗೆ ಜಿಕೆವಿಕೆಯಲ್ಲಿ ಕೃಷಿ ಮೇಳ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ. ಎಸ್.ವಿ. ಸುರೇಶ್ ತಿಳಿಸಿದರು.

ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಡೆಯುವ ಮೇಳದಲ್ಲಿ ಮುಸುಕಿನ ಜೋಳ, ಅಲಸಂಧೆ, ಸೂರ್ಯಕಾಂತಿ ಹಾಗೂ ಬಾಜ್ರ ನೇಪಿಯರ್ ತಳಿ ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಮಣ್ಣು ಹಾಗೂ ಬೆಳೆಗಳ ಆರೋಗ್ಯದ ಪರಿವೀಕ್ಷಣೆಗಾಗಿ ಬಹುಯೋಪಯೋಗಿ ಡ್ರೋನ್, ರಸಗೊಬ್ಬರ ಅಥವಾ ನಿಖರ ಪ್ರಮಾಣದಲ್ಲಿ ಔಷಧಿ ಸಿಂಪಡಿಸಲು ರೊಬೋಟ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣದ ಯಂತ್ರ, ಬೆಳೆ ಹಾಗೂ ಮಣ್ಣಿನ ಆಳಕ್ಕೆ ಅನುಗುಣವಾಗಿ ಭೂಮಿ ಸಿದ್ಧಪಡಿಸಲು ಆಳನಿಯಂತ್ರಕ ರೋಟವೇಟರ್ ಸೇರಿದಂತೆ ವಿವಿಧ ತಂತ್ರಜ್ಞಾನ ಪ್ರದರ್ಶನವಾಗಲಿದೆ ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ವಿ. ಸುರೇಶ್ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಕೃಷಿಮೇಳದಲ್ಲಿ ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಸಾವಯವ ಕೃಷಿ ಪದ್ಧತಿ, ಮಳೆ ಹಾಗೂ ಮೇಲ್ಚಾವಣಿ ನೀರಿನ ಕೊಯ್ಲು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಪಶುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ, ಕೃಷಿ ಆಟೋಮೇಷನ್ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಕೃಷಿ ಉತ್ಪನ್ನಗಳು ಸಂಬಂಧಿಸಿದ ಉಪಕರಣಗಳ ಪರಿಚಯ, ರೈತರ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ಪರಿಹಾರ, ಕೃಷಿ ಪ್ರಾತ್ಯಕ್ಷಿಕೆ, ಜಲಾಯನ ನಿರ್ವಹಣೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ, ಕೃಷಿ ಪರಿಕರಗಳ ಮಾರಾಟ ಒಳಗೊಂಡಂತೆ ಒಟ್ಟು ಸುಮಾರು 700 ಮಳಿಗೆಗಳಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಗುರುವಾರದಿಂದ ಆರಂಭವಾಗುವ ಮೇಳಕ್ಕೆ ಸಾರ್ವಜನಿಕರಿಗೆ ಜಿಕೆವಿಕೆ ಮುಖ್ಯದ್ವಾರದಿಂದ ಕೃಷಿ ಮೇಳದ ಸಭಾಂಗಣ ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ವಾಹನಗಳಲ್ಲಿ ಬರುವವರಿಗೆ ಪ್ರತ್ಯೇಕ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ನ.14ರಂದು ಸಿದ್ದರಾಮಯ್ಯ ಅವರು ಕೃಷಿಮೇಳಕ್ಕೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ ಒಳಗೊಂಡಂತೆ ಇನ್ನಿತರ ಸಚಿವರು ಭಾಗಿಯಾಗಲಿದ್ದಾರೆ. ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಆರು ಮಂದಿ ಭಾಜನರಾಗಿದ್ದಾರೆ. ಅಲ್ಲದೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗಳನ್ನ ಸಿದ್ದರಾಮಯ್ಯ ಅವರು ನೀಡಲಿದ್ದಾರೆ. ಕಳೆದ ಬಾರಿ 16 ಲಕ್ಷ ಮಂದಿ ಭಾಗಿಯಾಗಿದ್ದು, ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಹೊಂದಲಾಗಿದೆ ಎಂದು ಕುಲಪತಿ ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: 1 ಎಕರೆ, 4 ಲಕ್ಷ ರೂ. ಲಾಭ: ತಂಗಿ ಮದುವೆಗೆ ಆಸರೆಯಾದ ಕ್ಯಾಬೇಜ್: ಬೆಳಗಾವಿ ಯುವ ರೈತನ ಕೃಷಿ ಸಾಧನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.