ETV Bharat / state

ವೋಲ್ವೋ ಮಲ್ಟಿ ಆಕ್ಸಲ್ ಸೀಟರ್ ಪ್ರೋಟೋಟೈಪ್ ಬಸ್ ಖರೀದಿಗೆ ಮುಂದಾದ ಕೆಎಸ್​ಆರ್​ಟಿಸಿ: ಏನಿದರ ವಿಶೇಷತೆ? - VOLVO BUS

ಐರಾವತ ಕ್ಲಬ್ ಕ್ಲಾಸ್ ಸರಣಿಯಲ್ಲಿ ಹೊಸದಾಗಿ 20 ಬಸ್​ಗಳ ಖರೀದಿಗೆ ಕೆಎಸ್ಆರ್‌ಟಿಸಿ ಮುಂದಾಗಿದೆ. ಹೊಸ 9600 ಸೀರೀಸ್​ನ ವೋಲ್ವೋ ಮಲ್ಟಿ ಆಕ್ಸಲ್ ಸೀಟರ್ ಪ್ರೋಟೋಟೈಪ್ ಬಸ್​ ಅನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪರಿವೀಕ್ಷಣೆ ಮಾಡಿದರು.

author img

By ETV Bharat Karnataka Team

Published : Jul 6, 2024, 7:20 AM IST

Updated : Jul 6, 2024, 8:20 AM IST

KSRTC  KSRTC is ready to buy Volvo bus  Volvo multi axle seater prototype  Bengaluru
ಕೆಎಸ್ಆರ್​ಟಿಸಿ ಬತ್ತಳಿಕೆ ಸೇರಲಿವೆ ವೋಲ್ವೋ ಮಲ್ಟಿ ಆಕ್ಸಲ್ ಸೀಟರ್ ಪ್ರೋಟೋಟೈಪ್ ಬಸ್ (ETV Bharat)

ಬೆಂಗಳೂರು: ಐರಾವತ ಕ್ಲಬ್ ಕ್ಲಾಸ್ ಸರಣಿಯಲ್ಲಿ ಹೊಸದಾಗಿ 20 ಬಸ್​ಗಳ ಖರೀದಿಗೆ ಕೆಎಸ್ಆರ್‌ಟಿಸಿ ಮುಂದಾಗಿದ್ದು, ಹೊಸ 9600 ಸೀರೀಸ್​ನ ವೋಲ್ವೋ ಮಲ್ಟಿ ಆಕ್ಸಲ್ (VOLVO Multiaxle) ಸೀಟರ್ ಪ್ರೋಟೋಟೈಪ್ ಬಸ್​ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿವೀಕ್ಷಣೆ ನಡೆಸಿದರು.

ಶಾಂತಿ ನಗರದಲ್ಲಿರುವ ಕೇಂದ್ರ ಕಚೇರಿಯ ಆವರಣದಲ್ಲಿ ವೋಲ್ವೋ ಸಂಸ್ಥೆ ಕಳುಹಿಸಿಕೊಟ್ಟಿದ್ದ ಹೊಸ 9600 ವೋಲ್ವೋ ಮಲ್ಟಿ ಆಕ್ಸಲ್ ಸೀಟರ್ ಪ್ರೋಟೋಟೈಪ್ ಬಸ್​ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವೀಕ್ಷಿಸಿದರು. ವೋಲ್ವೋ ಪ್ರತಿನಿಧಿ ವಿನಯ್ ಬಸ್​ನ ವಿಶೇಷತೆಗಳು, ಹೊಸ ಸೌಲಭ್ಯಗಳ ಕುರಿತು ಸಚಿವರಿಗೆ ವಿವರಣೆ ನೀಡಿದರು. ಈ‌ ಬಸ್​ನ್ನು ವೀಕ್ಷಿಸಿ ಬಹುಮೆಚ್ಚುಗೆ ಸೂಚಿಸಿದ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್​ಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.

KSRTC  KSRTC is ready to buy Volvo bus  Volvo multi axle seater prototype  Bengaluru
ವೋಲ್ವೋ ಮಲ್ಟಿ ಆಕ್ಸಲ್ ಸೀಟರ್ ಪ್ರೋಟೋಟೈಪ್ ಬಸ್​ನಲ್ಲಿ ಕುಳಿತ ಸಚಿವ ರಾಮಲಿಂಗಾರೆಡ್ಡಿ (ETV Bharat)

ಈ ಬಸ್​ನ ವಿಶೇಷತೆಗಳು:

  • ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ಣು ತಣಿಸುವ ಸೌಂದರ್ಯ.
  • ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.
  • ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ.
  • ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ.
  • ಒಟ್ಟಾರೆ ಬಸ್ಸಿನ ಎತ್ತರದಲ್ಲಿ 5.6% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ.
  • ವಿಂಡ್‌ಶೀಲ್ಡ್ ಗಾಜು 9.5% ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.
  • ವಿಶಾಲ ಲಗೇಜ್ ಸ್ಥಳಾವಕಾಶವಿದ್ದು ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ.
  • USB + C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ.
  • ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.
  • ಉನ್ನತ ದರ್ಜೆ/ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ.
  • ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.
  • ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ.
  • ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.
  • ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜ಼ಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ.
  • ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ.

ಇದನ್ನೂ ಓದಿ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ ಜನತಾ ದರ್ಶನ: ಅಧಿಕಾರಿಗಳಿಗೆ ನಿರ್ಬಂಧ - Janata Darshana in Mandya

Last Updated : Jul 6, 2024, 8:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.