ETV Bharat / state

ಬೆಂಗಳೂರು: ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ - NATIONAL LOK ADALAT

ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿಯಾಗಬಲ್ಲ ಸೇರಿದಂತೆ ಹಲವು ರೀತಿಯ ಪ್ರಕರಣಗಳನ್ನು ಲೋಕ ಅದಾಲತ್​ನಲ್ಲಿ ಇತ್ಯರ್ಥ ಮಾಡಿಕೊಳ್ಳಬಹುದಾಗಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಮುರಳೀಧರ್ ಪೈ ತಿಳಿಸಿದ್ದಾರೆ.

Justice Muralidhar Pai Press Conference
ನ್ಯಾಯಾಧೀಶ ಮುರಳೀಧರ್ ಪೈ ಸುದ್ದಿಗೋಷ್ಠಿ (ETV Bharat)
author img

By ETV Bharat Karnataka Team

Published : Nov 29, 2024, 7:41 PM IST

ಬೆಂಗಳೂರು: "ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳ ಶೀಘ್ರ ಇತ್ಯರ್ಥಗೊಳಿಸಲು ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ" ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರದ ಅಧ್ಯಕ್ಷ ಮುರಳೀಧರ್ ಪೈ ತಿಳಿಸಿದರು.

ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ 26,353 ಬಾಕಿಯಿರುವ ಪ್ರಕರಣಗಳು, 3,66,241 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 3,92,594 ಪ್ರಕರಣಗಳು ಅದಾಲತ್‌ನಲ್ಲಿ ವಿಚಾರಣೆಗೆ ನಿಗದಿಯಾಗಿದೆ. 35 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಗುರಿಯಿದೆ" ಎಂದರು.

"ಅಲ್ಲದೇ, ಕಾನೂನು ಸೇವೆಗಳ ಪ್ರಾಧಿಕಾರದಿಂದ ಜೈಲಿನಲ್ಲಿರುವ ಅಪರಾಧಿಗಳಿಗೆ ಕಾನೂನು ಸೇವೆ ಒದಗಿಸಲು ಹೊಸ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಕರಣಗಳನ್ನು ನಡೆಸಲು ತೊಂದರೆ ಅನುಭವಿಸುತ್ತಿರುವ ಅಪರಾಧಿಗಳು ನ್ಯಾಯಾಲಯದ ಗಮನಕ್ಕೆ ತಂದು ಪ್ರಾಧಿಕಾರದಿಂದ ವಕೀಲರ ಉಚಿತ ಕಾನೂನು ಸೇವೆ ಪಡೆಯಬಹುದಾಗಿದೆ. ಆದಷ್ಟು ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಲಾಗುವುದು" ಎಂದರು.

"ಲೋಕ ಆದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್‌ಮಿಲನ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನಗಳನ್ನು ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು" ಎಂದು ಹೇಳಿದರು.

"ಉಚಿತ ಸೇವೆಗಳನ್ನು ಪಡೆಯಲು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ ಅಭಿವೃದ್ಧಿಪಡಿಸಿದ್ದು, ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ದೇಶದ ಯಾವುದೇ ಭಾಗದ ಸಾರ್ವಜನಿಕರು ಯಾವುದೇ ಭಾಷೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ" ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ವರದರಾಜು ಬಿ. ಉಪಸ್ಥಿತರಿದ್ದರು.

ಇದನ್ನೂ ಓದಿ: ಲೋಕ ಅದಾಲತ್: ಒಂದೇ ದಿನ 35 ಲಕ್ಷ ಪ್ರಕರಣ ಇತ್ಯರ್ಥ, ಮತ್ತೆ ಒಂದಾದ 248 ಜೋಡಿಗಳು - Lok Adalat

ETV Bharat Logo

Copyright © 2025 Ushodaya Enterprises Pvt. Ltd., All Rights Reserved.