ETV Bharat / state

ಪ್ರೇಯಸಿಯ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ₹2 ಕೋಟಿಗೂ ಹೆಚ್ಚು ಸುಲಿಗೆ, ಆರೋಪಿ ಸೆರೆ - EXTORTION CASE

ತನ್ನ ಪ್ರೇಯಸಿಯ ಖಾಸಗಿ ಫೋಟೋ, ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಸುಲಿಗೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

CCB
ಕೇಂದ್ರ ಅಪರಾಧ ವಿಭಾಗ, ಬೆಂಗಳೂರು (ETV Bharat)
author img

By ETV Bharat Karnataka Team

Published : Dec 6, 2024, 3:22 PM IST

Updated : Dec 6, 2024, 7:50 PM IST

ಬೆಂಗಳೂರು: ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಯುವತಿಗೆ ಬೆದರಿಸಿ 2.57 ಕೋಟಿ ರೂ. ಸುಲಿಗೆ ಮಾಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 19 ವರ್ಷದ ಯುವತಿ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಪ್ರಕರಣದ ಪೂರ್ಣ ವಿವರ: ದೂರುದಾರ ಯುವತಿ 2017ರಿಂದ 2022ರ ಅವಧಿಯಲ್ಲಿ ದೇವನಹಳ್ಳಿಯ ಖಾಸಗಿ ಶಾಲೆಯಲ್ಲಿ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾಗ ಆರೋಪಿ ಯುವಕನ ಪರಿಚಯವಾಗಿತ್ತು. ಆ ಸಂದರ್ಭದಲ್ಲಿ ಮದುವೆಯಾಗುವುದಾಗಿ ನಂಬಿಸಿ ಆರೋಪಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಹೈಸ್ಕೂಲ್ ಶಿಕ್ಷಣ ಮುಗಿದ ನಂತರವೂ ಸಹ ಯುವತಿಯನ್ನು ಪಾರ್ಟಿ, ಪ್ರವಾಸ ಎಂದು ಕರೆದೊಯ್ದು, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇಬ್ಬರ ನಡುವಿನ ಖಾಸಗಿ ಕ್ಷಣಗಳ ಫೋಟೋ, ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಧ್ಯಮಗೋಷ್ಟಿ (ETV Bharat)

ಇತ್ತೀಚಿಗೆ ತನಗೆ ಹಣದ ಅವಶ್ಯಕತೆಯಿದೆ ಕೊಡು ಎಂದಾಗ ಯುವತಿ ನಿರಾಕರಿಸಿದ್ದಳು. ಹಣ ಕೊಡದಿದ್ದರೆ ಖಾಸಗಿ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ‌ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಯುವತಿ ಹಣ ಹೊಂದಿಸಿ ಕೊಡಲು ಸಾಧ್ಯವಾಗದಿದ್ದಾಗ ನೇರವಾಗಿ ಅವರ ಮನೆಯವರಿಗೆ ಆಕೆಯ ಖಾಸಗಿ ಫೋಟೋ, ವಿಡಿಯೋ ಕಳಿಸಿ ಬೆದರಿಸಿದ್ದಲ್ಲದೆ, 2.5 ಕೋಟಿ ರೂ ಸುಲಿಗೆ ಮಾಡಿದ್ದಾನೆ. ಆರೋಪಿ ತನ್ನ ಪ್ರೀತಿಯನ್ನೂ ನಿರಾಕರಿಸಿ ಹಣ ಸುಲಿಗೆ ಮಾಡುವುದನ್ನು ಮುಂದುವರೆಸಿದಾಗ ಕಿರುಕುಳ ತಾಳಲಾರದ ಯುವತಿ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನಿಂದ ಸುಮಾರು 80 ಲಕ್ಷ ರೂ. ವಶಕ್ಕೆ ಪಡೆದಿದ್ದೇವೆ. ವಿಚಾರಣೆ ಮುಂದುವರೆದಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಇದನ್ನೂ ಓದಿ : ಸುಲಿಗೆ ಪ್ರಕರಣ: 8 ಕಿ.ಮೀ ಬೆನ್ನತ್ತಿ ಆರೋಪಿಗಳ ಸೆರೆ ಹಿಡಿದ ಪೊಲೀಸರು

Last Updated : Dec 6, 2024, 7:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.