ETV Bharat / state

ಮಾರಕಾಸ್ತ್ರಗಳ ಸಹಿತ ಬಾರ್ ಆ್ಯಂಡ್ ರೆಸ್ಟೊರೆಂಟ್‌ನಲ್ಲಿ ಕುಳಿತಿದ್ದ ಇಬ್ಬರ ಬಂಧನ - BENGALURU CRIME - BENGALURU CRIME

ಮಾರಕಾಸ್ತ್ರ ಸಮೇತವಾಗಿ ಬಾರ್​ಗೆ ತೆರಳಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು (ETV Bharat)
author img

By ETV Bharat Karnataka Team

Published : May 20, 2024, 12:24 PM IST

ಬೆಂಗಳೂರು: ಬಾರ್ ಆ್ಯಂಡ್ ರೆಸ್ಟೊರೆಂಟ್‌ನಲ್ಲಿ ಮಾರಕಾಸ್ತ್ರ ಹಿಡಿದು ಕುಳಿತು, ಇತರೆ ಗ್ರಾಹಕರಿಗೆ ಭಯವನ್ನುಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಣ್ಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ. ಹಳ್ಳಿಯ ನಿವಾಸಿಗಳಾದ ಸೈಯದ್ ಸುಹೇಬ್ (24) ಹಾಗೂ ಸೈಯದ್ ಮುಬಾರಕ್ (23) ಬಂಧಿತ ಆರೋಪಿಗಳು.

ಮೇ 12ರಂದು ರಾತ್ರಿ ಹೆಣ್ಣೂರು ಪೊಲಿಸ್ ಠಾಣಾ ವ್ಯಾಪ್ತಿಯ ಬಾಲಾಜಿ ಬಾರ್ ಆ್ಯಂಡ್ ರೆಸ್ಟೋರಂಟ್‌ಗೆ ಮಾರಕಾಸ್ತ್ರಗಳ ಸಮೇತ ಬಂದಿದ್ದ ಆರೋಪಿಗಳು ಇತರೆ ಗ್ರಾಹಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದರು. ಬಾರ್ ಸಿಬ್ಬಂದಿ ನೀಡಿದ ಮಾಹಿತಿ ಆಧರಿಸಿ ಕೂಡಲೇ ಸ್ಥಳಕ್ಕೆ ತೆರಳಿದ್ದ ಹೆಣ್ಣೂರು ಠಾಣೆಯ ಹೊಯ್ಸಳ ಸಿಬ್ಬಂದಿ ಪರಿಶೀಲಿಸಿದ್ದರು. ಈ ವೇಳೆ ಆರೋಪಿಗಳಿಬ್ಬರು ರೆಸ್ಟೋರಂಟ್‌ನ ಇತರೆ ಗ್ರಾಹಕರಲ್ಲಿ ಭಯವುಂಟಾಗುವಂತೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಕುಳಿತಿರುವುದು ಕಂಡು ಬಂದಿತ್ತು.

ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೇವ್ ಪಾರ್ಟಿ ನಡೆಯುತ್ತಿದ್ದ ಫಾರ್ಮ್​​​ ಹೌಸ್ ಮೇಲೆ ಸಿಸಿಬಿ ದಾಳಿ: ತೆಲುಗು ಕಿರುತೆರೆ ನಟ, ನಟಿಯರು ಸೇರಿ 78 ಜನ ವಶಕ್ಕೆ - BENGALURU RAVE PARTY

ETV Bharat Logo

Copyright © 2024 Ushodaya Enterprises Pvt. Ltd., All Rights Reserved.