ETV Bharat / state

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸಿಬ್ಬಂದಿಗೆ ಪೊಲೀಸ್ ಆಯುಕ್ತರ ಎಚ್ಚರಿಕೆ - Bengaluru Police Commissioner - BENGALURU POLICE COMMISSIONER

ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ವೃತ್ತಿಗೆ ಸಂಬಂಧಪಡದ ವಿಷಯಗಳನ್ನು ಪೋಸ್ಟ್‌ ಮಾಡದಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಇಲಾಖಾ ಸಿಬ್ಬಂದಿಗೆ ಸೂಚಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ (ETV Bharat)
author img

By ETV Bharat Karnataka Team

Published : Jul 23, 2024, 7:17 AM IST

ಬೆಂಗಳೂರು: ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ, ರೀಲ್ಸ್ ಸೇರಿದಂತೆ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಪಡದ ಯಾವುದೇ ವಿಷಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡದಂತೆ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಸಿದ್ದಾರೆ.

"ಸಮವಸ್ತ್ರದಲ್ಲಿರುವ ಫೋಟೋ/ರೀಲ್ಸ್ /ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಪೊಲೀಸ್ ಇಲಾಖೆಯ ಅಧಿಕೃತ ಕೆಲಸಗಳ ಕುರಿತು ಅನಿಸಿಕೆ ವ್ಯಕ್ತಪಡಿಸುವುದು ಇಲಾಖೆಯ ನಿಯಮ ಮತ್ತು ಪಾಲನೆಗಳಿಗೆ ವಿರುದ್ಧ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ."

"ಪೊಲೀಸ್ ಸಮವಸ್ತ್ರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತ. ಆದ್ದರಿಂದ ಯಾವುದೇ ಸಾರ್ವಜನಿಕ ಅಥವಾ ಡಿಜಿಟಲ್ ಫೋರಮ್​ನಲ್ಲಿ ಇದರ ಬಳಕೆ ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕು. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರ ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾಧ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಅಧಿಕೃತ ಮಾಹಿತಿ ಹಂಚಿಕೊಳ್ಳಲು ಅವಕಾಶವಿದೆ. ಯಾವುದೇ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು" ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಕಮಿಷನರ್ ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಪೊಲೀಸ್ ಕಮಿಷನರ್ ಬಿ.ದಯಾನಂದ್‌ ಬೈಕ್ ರೈಡ್: ವಿಡಿಯೋ - Police Commissioner Dayanand

ETV Bharat Logo

Copyright © 2025 Ushodaya Enterprises Pvt. Ltd., All Rights Reserved.