ETV Bharat / state

ನಮ್ಮ ಮೆಟ್ರೋ ಅಧಿಕಾರಿಯಿಂದ ಮಹಿಳಾ ಸೆಕ್ಯೂರಿಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು - case against namma metro officer

ನಮ್ಮ ಮೆಟ್ರೋ ನಿಲ್ಲಾಣದ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಭದ್ರತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣ ಕೂಡಾ ದಾಖಲಾಗಿದೆ.

bengaluru-police-lodged-sexual-harassment-case-against-namma-metro-officer
ನಮ್ಮ ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು
author img

By ETV Bharat Karnataka Team

Published : Mar 16, 2024, 5:30 PM IST

ಬೆಂಗಳೂರು: ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮಹಿಳಾ ಸೆಕ್ಯೂರಿಟಿಯೊಂದಿಗೆ ಅನುಚಿತ ವರ್ತನೆ ತೋರಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮೆಟ್ರೊ ಅಧಿಕಾರಿ ವಿರುದ್ಧ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಅಸಿಸ್ಟೆಂಟ್ ಸೆಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಗಜೇಂದ್ರನ್, ಸೆಕ್ಯೂರಿಟಿ ಕಂಪನಿ ಮಾಲೀಕ ಪ್ರಕಾಶ್ ನಿಟ್ಟೂರು ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುತ್ತಿಗೆ ಆಧಾರದ ಮೇರೆಗೆ ವಿಸಿಡಂ ಏಜೆನ್ಸಿ ಮೂಲಕ ನೊಂದ ಮಹಿಳೆಯು ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡು ಮೆಟ್ರೊ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ನಿಲ್ದಾಣದಲ್ಲಿ ಗಜೇಂದ್ರನ್ ಎಎಸ್​ಒ ಆಗಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಅವಧಿಯಲ್ಲಿ ನನ್ನನ್ನು ಒಳಗೊಂಡಂತೆ ಕೆಲ ಮಹಿಳಾ ಸಿಬ್ಬಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ದೇಹದ ಅಂಗಾಂಗದ ಬಗ್ಗೆ ವರ್ಣನೆ ಮಾಡಿ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಒತ್ತಾಯ ಪೂರ್ವಕವಾಗಿ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಸುಳ್ಳು ಆರೋಪ ಹೊರಿಸಿ ಬೇರೆ ಸ್ಟೇಷನ್​ಗೆ ವರ್ಗಾಯಿಸುತ್ತೇನೆ. ಅಲ್ಲದೇ, ಕೆಲಸದಿಂದ ಬಿಡಿಸುವುದಾಗಿ ಬೆದರಿಸಿದ್ದರು ಎಂದು ಮಹಿಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಮ್ಮ ಮೆಟ್ರೋ ಅಧಿಕಾರಿಯಿಂದ‌ ಕಿರುಕುಳ ನೀಡುತ್ತಿರುವ ಬಗ್ಗೆ ಸೆಕ್ಯೂರಿಟಿ ಏಜೆನ್ಸಿ ಮಾಲೀಕ ಪ್ರಕಾಶ್ ಅವರಿಗೆ ವಿಷಯ ತಿಳಿಸಿದರೆ, ಸಾಧ್ಯವಾದರೆ ಸಹಕರಿಸಿ, ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ, ನಿಮಗಾಗಿ ಅಧಿಕಾರಿಯನ್ನ ಎದುರು ಹಾಕಿಕೊಳ್ಳುವುದಿಲ್ಲ. ನಿಮ್ಮನ್ನ‌ ಕೆಲಸದಿಂದ ತೆಗೆದುಹಾಕುತ್ತೇನೆ. ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಹೆದರಿಸಿ ಅವಮಾನಗೊಳಿಸಿರುವುದಾಗಿ ದೂರಿನಲ್ಲಿ ಮಹಿಳೆ ವಿವರಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರಿಗೆ ನೋಟಿಸ್​ ನೀಡಿ ಅವರ ಹೇಳಿಕೆ ಪಡೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.