ETV Bharat / state

ಟೆಕ್ಕಿ ಆತ್ಮಹತ್ಯೆ ಪ್ರಕರಣ: ಉತ್ತರ ಪ್ರದೇಶಕ್ಕೆ ತೆರಳಿದ ಬೆಂಗಳೂರು ಪೊಲೀಸರ ತಂಡ - TECHIE SUICIDE CASE

ಡೆತ್ ನೋಟ್‌ ಬರೆದಿಟ್ಟು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗಾಗಿ ಬೆಂಗಳೂರು ಪೊಲೀಸರ ತಂಡ ಉತ್ತರ ಪ್ರದೇಶದತ್ತ ತೆರಳಿದೆ.

atul shubhash
ಮಾರತ್​ಹಳ್ಳಿ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Dec 12, 2024, 10:51 AM IST

ಬೆಂಗಳೂರು: ಸಾಫ್ಟ್​​ವೇರ್​ ಇಂಜಿನಿಯರ್ ಅತುಲ್ ಸುಭಾಷ್ (34) ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಮಾರತ್​ಹಳ್ಳಿ ಠಾಣೆ ಪೊಲೀಸರ ತಂಡ‌ ಆರೋಪಿಗಳ ವಿಚಾರಣೆ ನಡೆಸಲು ಉತ್ತರ ಪ್ರದೇಶಕ್ಕೆ ತೆರಳಿದೆ.

ಪ್ರಕರಣದ ತನಿಖಾಧಿಕಾರಿಯಾಗಿರುವ ಪಿಎಸ್ಐ ಜ್ಞಾನದೇವ್ ನೇತೃತ್ವದ ತಂಡ ಉತ್ತರ ಪ್ರದೇಶದ ಜೌನ್ ಪುರ್‌ಗೆ ತಲುಪಿದೆ. ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್​​ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನ ಅನ್ವಯ ಮಾರತ್​​ ಹಳ್ಳಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗಿದೆ. ಅದರನ್ವಯ ಉತ್ತರ ಪ್ರದೇಶದತ್ತ ತೆರಳಿರುವ ಪೊಲೀಸರ ತಂಡ, ಮೊದಲು ನೋಟಿಸ್ ಜಾರಿಗೊಳಿಸಿ ಮೃತನ ಪತ್ನಿಯ ವಿಚಾರಣೆ ನಡೆಸಲಿದೆ. ವಿಚಾರಣೆಗೆ ಸಹಕರಿಸದಿದ್ದರೆ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ. ಬಳಿಕ ಬಿಹಾರಕ್ಕೆ ತೆರಳಲಿರುವ ಪೊಲೀಸರು, ಅತುಲ್ ಸುಭಾಷ್ ಅವರ ಪೋಷಕರು, ಸಹೋದರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣ; ಪತ್ನಿ ಸಹಿತ ನಾಲ್ವರ ವಿರುದ್ಧ ಎಫ್ಐಆರ್

ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಡಿಸೆಂಬರ್ 9ರಂದು ಮಾರತ್ ಹಳ್ಳಿಯ ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಮಾರು 24 ಪುಟಗಳ ಡೆತ್ ನೋಟ್ ಬರೆದಿಟ್ಟು, ಸಾವಿನ ಬಳಿಕ ಮೃತದೇಹ ಗಮನಿಸುವವರಿಗೆ ವ್ಯವಸ್ಥಿತವಾಗಿ ಸೂಚನೆಗಳನ್ನು ನೀಡಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿತ್ತು.

ಎಫ್ಐಆರ್‌ನಲ್ಲಿನ ವಿವರ: ಅತುಲ್ ಸುಭಾಷ್, ನಿಖಿತಾ ಸಿಂಘಾನಿಯಾಗೆ 2019ರಲ್ಲಿ ಮದುವೆಯಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗು ಕೂಡ ಇದೆ. ಆದರೆ ತನ್ನ ತಾಯಿ ಹಾಗೂ ಸಹೋದರನ ಕುಮ್ಮಕ್ಕಿನಿಂದ ಪತಿ ಅತುಲ್ ಸುಭಾಷ್ ವಿರುದ್ಧ ನಿಕಿತಾ ಸುಳ್ಳು ದೂರು ದಾಖಲಿಸಿದ್ದಳು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆರೋಪಿಗಳು ಅತುಲ್ ಸುಭಾಷ್‌ಗೆ ಪುತ್ರನ ಭೇಟಿಗೂ ಅವಕಾಶ ನೀಡದೇ 30 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಅಲ್ಲದೆ, ಪ್ರಕರಣದ ನ್ಯಾಯಾಲಯದ ಕಲಾಪಗಳಿಗೆ ಅತುಲ್ ಸುಭಾಷ್ ಹಾಜರಾದ ಸಂದರ್ಭದಲ್ಲಿ '3 ಕೋಟಿ ರೂ. ಕೊಡು, ಇಲ್ಲದಿದ್ದರೆ ಬದುಕಿರಬೇಡ' ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದು ಅತುಲ್ ಸುಭಾಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಕಾಸ್ ಕುಮಾರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಾ. ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದರು.

ಆತ್ಮಹತ್ಯೆ ಪರಿಹಾರವಲ್ಲ; ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).

ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಕೇಸ್​: ಬಂಧಿಸದಂತೆ ಡಿವೈಎಸ್​​ಪಿ ಕನಕಲಕ್ಷ್ಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.