ETV Bharat / state

ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: 20ಕ್ಕೆ ಮತ ಎಣಿಕೆ - ಚುನಾವಣೆ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಅಂತಿಮ ಹಂತದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಇಂದು ಸಭೆ ನಡೆಯಿತು.

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಭೆ
ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಭೆ
author img

By ETV Bharat Karnataka Team

Published : Feb 14, 2024, 9:39 PM IST

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಫೆಬ್ರುವರಿ 16ರಂದು ನಿಗದಿಯಾಗಿದೆ. ನಗರದ 43 ಮತಗಟ್ಟೆಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಚುನಾವಣೆಯ ಸಂಬಂಧ ಅಂತಿಮ ಹಂತದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಬುಧವಾರ ಮಲ್ಲೇಶ್ವರದ ಐಪಿಪಿ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 14,432 ಮತದಾರರಿದ್ದಾರೆ ಎಂದರು.

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಭೆ
ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ ಕುರಿತು ಅಧಿಕಾರಿಗಳ ಸಭೆ

ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗುತ್ತದೆ. ಮೇಲ್ವಿಚಾರಣೆಗಾಗಿ ಎಫ್.ಎಸ್.ಟಿ, ಎಸ್.ಎಸ್.ಟಿ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಮತಗಟ್ಟೆಗಳ ಬಳಿ 144 ಸೆಕ್ಷನ್ ಜಾರಿಯಲ್ಲಿರಲಿದೆ. ಮತಗಟ್ಟೆಯ 100 ಮೀಟರ್ ಅಂತರದಲ್ಲಿ 5 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು.

ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವನ್ನಾಗಿ ಸಂಪಂಗಿರಾಮನಗರದ ಸರ್ಕಾರಿ ಕಲಾ ಕಾಲೇಜನ್ನು ಆಯ್ಕೆ ಮಾಡಲಾಗಿದೆ. ಫೆಬ್ರವರಿ 20ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್.ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸದನದಲ್ಲಿ ಸದ್ದು ಮಾಡಿದ ರಾಮಮಂದಿರ; ಕಾಂಗ್ರೆಸ್-ಬಿಜೆಪಿ ಸದಸ್ಯರ ಮಧ್ಯೆ ಜಟಾಪಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.