ETV Bharat / state

ಲೈಸನ್ಸ್‌ ಪಡೆಯದೆ ಶಾಲೆಗೆ ಬೈಕ್‌ ಸವಾರಿ: 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರಿಗೆ ದಂಡ

18 ವರ್ಷ ತುಂಬದ ಮತ್ತು ಡಿಎಲ್ ಇಲ್ಲದ ವಿದ್ಯಾರ್ಥಿಗಳ ಪೋಷಕರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

ವಿದ್ಯಾರ್ಥಿಗಳ ಪೋಷಕರಿಗೆ ದಂಡ
ವಿದ್ಯಾರ್ಥಿಗಳ ಪೋಷಕರಿಗೆ ದಂಡ
author img

By ETV Bharat Karnataka Team

Published : Feb 2, 2024, 10:41 AM IST

Updated : Feb 2, 2024, 3:35 PM IST

ದಕ್ಷಿಣ ವಿಭಾಗ ಸಂಚಾರ ಡಿಸಿಪಿ‌ ಶಿವಪ್ರಕಾಶ್ ದೇವರಾಜ್ ಪ್ರತಿಕ್ರಿಯೆ

ಬೆಂಗಳೂರು: ನಗರದಲ್ಲಿ ಚಾಲನಾ ಪರವಾನಗಿ (ಡ್ರೈವಿಂಗ್ ಲೈಸನ್ಸ್) ಹೊಂದದೆ ಹಾಗೂ 18 ವರ್ಷವಾಗದ ವಿದ್ಯಾರ್ಥಿಗಳು ಬೈಕ್ ಚಲಾಯಿಸುವ ಸಂಖ್ಯೆ ಹೆಚ್ಚಾಗಿದೆ. ಈ ಮೂಲಕ ಅಪಘಾತ ಪ್ರಮಾಣ ಹೆಚ್ಚಳಕ್ಕೆ ಕಾರಣರಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ವಿದ್ಯಾರ್ಥಿಗಳ ಪೋಷಕರಿಗೆ ದಂಡ ವಿಧಿಸಿ ಬೈಕ್ ನೀಡದಂತೆ ತಾಕೀತು ಮಾಡಿದ್ದಾರೆ.

ನಗರದಲ್ಲಿ 1,500ಕ್ಕೂ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ಸಂಚಾರಿ ಪೊಲೀಸರು ದಂಡದ ಬರೆ ಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಮಕ್ಕಳು ಶಾಲಾ-ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಈ ಸಂಖ್ಯೆ ವಿಪರೀತವಾದಂತೆ ಟ್ರಾಫಿಕ್ ಪೊಲೀಸರು ಎಚ್ಚೆತ್ತುಕೊಂಡು ನಗರದ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ತೆರಳಿ ತಪಾಸಣೆ ನಡೆಸಿದ್ದಾರೆ.

ಘಟನೆಗಳು ಮರುಕಳಿಸಿದರೆ ಪ್ರಕರಣ ದಾಖಲಿಸುವುದಾಗಿಯೂ ಪೊಲೀಸರು ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಶಾಲೆಗಳಿಂದ ಸರ್ಕ್ಯುಲೇಷನ್ ಹೊರಡಿಸಲು ಸೂಚಿಸಲಾಗಿದೆ. ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಸರ್ಕ್ಯುಲೇಷನ್ ಹೊರಡಿಸುವ ಭರವಸೆ ನೀಡಿವೆ ಎಂದು ದಕ್ಷಿಣ ವಿಭಾಗ ಸಂಚಾರ ಡಿಸಿಪಿ‌ ಶಿವಪ್ರಕಾಶ್ ದೇವರಾಜ್ ತಿಳಿಸಿದರು.

ಇದನ್ನೂ ಓದಿ: ಅರ್ಧ ಹೆಲ್ಮೆಟ್, ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ರೋಲರ್‌ ಹತ್ತಿಸಿ ನಾಶಪಡಿಸಿದ ಪೊಲೀಸರು

Last Updated : Feb 2, 2024, 3:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.