ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪಂಕ್ಚರ್ ಮಾಫಿಯಾ ಸಕ್ರಿಯವಾಗಿದೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಹೌದು, ಜಾಲಹಳ್ಳಿಯ ಕುವೆಂಪು ವೃತ್ತದ ಅಂಡರ್ ಪಾಸ್ನಲ್ಲಿ ಮುಷ್ಟಿಗಟ್ಟಲೇ ಮೊಳೆಗಳು ಪತ್ತೆಯಾಗಿವೆ. ಸ್ವತಃ ಟ್ರಾಫಿಕ್ ಪೊಲೀಸರೇ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೊಳೆಗಳನ್ನು ಹೆಕ್ಕಿ ತೆಗೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಂಚಾರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೊಳೆಗಳು ರಸ್ತೆ ಮೇಲೆ ಬಿದ್ದಿರುವುದರ ಹಿಂದೆ ಸುತ್ತಮುತ್ತಲಿನ ಪಂಕ್ಚರ್ ಶಾಪ್ಗಳ ಕೈವಾಡವಿರಬಹುದೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾರೆಯೇ?. ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂಚಾರ ಪೊಲೀಸರಿಗೆ ಸಲಹೆ ಕೂಡಾ ನೀಡಿದ್ದಾರೆ.
ಈ ದಿನ ಠಾಣಾ ಸರಹದ್ದಿನ ಕುವೆಂಪು ವೃತ್ತದ ಅಂಡರ್ ಪಾಸ್ ನಲ್ಲಿ ಬಿದ್ದಿದ್ದ ಮಳೆಗಳಿಂದ ವಾಹನಗಳು ಪಂಚರ್ ಆಗುತ್ತಿದ್ದುದನ್ನು ಗಮನಿಸಿದ ಠಾಣೆಯ ಸಿಬ್ಬಂದಿಯವರು, ಮಳೆಗಳನ್ನು ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು .@blrcitytraffic@Jointcptraffic@DCPTrNorthBCP@acp_north pic.twitter.com/jnhzEzKMxK
— JALAHALLI TRAFFIC BTP (@jalahallitrfps) July 27, 2024
"ಈ ದಿನ ಠಾಣಾ ಸರಹದ್ದಿನ ಕುವೆಂಪು ವೃತ್ತದ ಅಂಡರ್ ಪಾಸ್ ನಲ್ಲಿ ಬಿದ್ದಿದ್ದ ಮೊಳೆಗಳಿಂದ ವಾಹನಗಳು ಪಂಕ್ಚರ್ ಆಗುತ್ತಿರುವುದನ್ನು ಗಮನಿಸಿದ ಠಾಣೆಯ ಸಿಬ್ಬಂದಿ, ಮೊಳೆಗಳನ್ನು ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು" ಎಂದು ಜಾಲಹಳ್ಳಿ ಟ್ರಾಫಿಕ್ ಬಿಟಿಪಿ ಎಕ್ಸ್ ಪೋಸ್ಟ್ ಮಾಡಿದೆ.
ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು IT ಉದ್ಯೋಗಿಗಳು ಸಾವು - BBMP Garbage Lorry Accident