ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಮಹಿಳಾ ಪೊಲೀಸ್ ಸಿಬ್ಬಂದಿ ರಕ್ಷಿಸಿದ ಘಟನೆ ಸೋಮವಾರ ನಗರದ ಟ್ರಿನಿಟಿ ಜಂಕ್ಷನ್ ಬಳಿ ನಡೆದಿದೆ. ಪಿಎಸ್‌ಐ ಕವಿತಾ ಮತ್ತು ಕಾನ್‌ಸ್ಟೇಬಲ್ ಪಲ್ಲವಿ ಎಂಬವರು ಬಾಲಕಿಯನ್ನು ರಕ್ಷಿಸಿದ್ದಾರೆ.
ಘಟನೆಯ ವಿವರ: ಟ್ರಿನಿಟಿ ಜಂಕ್ಷನ್ನಲ್ಲಿ ಪಿಎಸ್‌ಐ ಕವಿತಾ ಮತ್ತು ಕಾನ್‌ಸ್ಟೇಬಲ್ ಪಲ್ಲವಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಬಾಲಕಿಯೊಬ್ಬಳು ನಿತ್ರಾಣಗೊಂಡು ಕುಸಿದು ಬಿದ್ದಿರುವುದನ್ನು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ವಿಚಾರಿಸಿದಾಗ, ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಆಕೆ ಕೂಗುತ್ತಿದ್ದಳು. ಕೂಡಲೇ 112ಗೆ ಕರೆ ಮಾಡಿ ಮಾಹಿತಿ ನೀಡಿದ ಪೊಲೀಸ್ ಸಿಬ್ಬಂದಿ, ಬಾಲಕಿಯನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ ಎಂದು ಸಂಚಾರ ಪೂರ್ವ ಉಪ ಪೊಲೀಸ್ ಆಯುಕ್ತರ 'ಎಕ್ಸ್' ಖಾತೆಯಲ್ಲಿ ತಿಳಿಸಲಾಗಿದೆ.
ದಿನಾಂಕ:08.10.2024 ರಂದು @halasoortrfps ನ ಟ್ರಿನಿಟಿ ಜಂಕ್ಷನ್ ನಲ್ಲಿ PSI ಕವಿತಾ & WPC ಪಲ್ಲವಿ ರವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬಾಲಕಿಯೊಬ್ಬಳು ಕುಸಿದು ಬಿದ್ದಿದ್ದನ್ನು ಕಂಡು ಕೂಡಲೇ ಸಂರಕ್ಷಿಸಿ ವಿಚಾರಿಸಿದಾಗ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಚೀರಾಡುತ್ತಿದ್ದು, ಕೂಡಲೆ 112 ಗೆ ಕರೆ ಮಾಡಿ ಮಾಹಿತಿ ನೀಡಿ 1/2... pic.twitter.com/Che5lLl85h
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) October 9, 2024
ಇದನ್ನೂ ಓದಿ: ಕಾರವಾರ: ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಾವು, ಓರ್ವನ ರಕ್ಷಣೆ