ಬೆಂಗಳೂರು: ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ಗಳನ್ನು ನೀರಾವರಿ ಫೀಡರ್ಗಳಲ್ಲಿ ಬಳಸದಂತೆ ರೈತರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮನವಿ ಮಾಡಿದೆ.
ರೈತರ ಪಂಪ್ ಸೆಟ್ಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ, ನೀರಾವರಿ ಫೀಡರ್ಗಳ ಮೂಲಕ ತೋಟದ ಮನೆಗಳಿಗೆ ಗೃಹೋಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.
ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ಗಳನ್ನು ನೀರಾವರಿ ಫೀಡರ್ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ (ಸಂಜೆ 6 ರಿಂದ ಬೆಳಗ್ಗೆ 6ರವರೆಗೆ) ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ಗಳನ್ನು ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ ಮಾಡಿದೆ.
ಇದನ್ನೂ ಓದಿ: ಸ್ಮಾರ್ಟ್ ಕೃಷಿಗೆ ಬಂದಿದೆ 'ಕೈರೋ' ಡಿವೈಸ್: ಈ ಉಪಕರಣದ ಅನುಕೂಲಗಳೇನು?