ETV Bharat / state

ಗಣೇಶೋತ್ಸವಕ್ಕೆ ಬೆಸ್ಕಾಂ ಸುರಕ್ಷತಾ ಮಾರ್ಗಸೂಚಿ: ತಾತ್ಕಾಲಿಕ ವಿದ್ಯುತ್ ಸಂಪರ್ಕದ ಮಾಹಿತಿ ಬಿಡುಗಡೆ - BESCOM Safety Guidelines - BESCOM SAFETY GUIDELINES

ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ನಿಮಜ್ಜನೆ ವೇಳೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ವಿದ್ಯುತ್​ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ಬೆಸ್ಕಾಂ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದೆ.

ಬೆಸ್ಕಾಂ
ಬೆಸ್ಕಾಂ (ETV Bharat)
author img

By ETV Bharat Karnataka Team

Published : Sep 4, 2024, 1:18 PM IST

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಸುರಕ್ಷತಾ ಮಾರ್ಗಸೂಚಿ ಬಿಡುಗಡೆಗೊಳಿಸಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಕೂಡ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಹಬ್ಬದ ಸಂಭ್ರಮದ ಜೊತೆಗೆ ಸುರಕ್ಷತೆ ಬಗ್ಗೆಯೂ ಸಾರ್ವಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ನಿಮಜ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರ ವಹಿಸಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.

ಸುರಕ್ಷತಾ ಮಾರ್ಗಸೂಚಿಗಳು: ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಬೇಕು. ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಬೇಕು. ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯಬಾರದು. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟಬಾರದು. ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಬಾರದು. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತಂದರೆ ಅವರು ಅಗತ್ಯ ನೆರವು ಒದಗಿಸಲಿದ್ದಾರೆ. ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಬೇಕು. ಅಧಿಕಾರಿಗಳು ಸಹ ವಿದ್ಯುತ್ ಪರಿಕರಗಳು ಇರುವ ಸ್ಥಳಗಳನ್ನು ಡೇಂಜರ್ ಜೋನ್ ಎಂದು ಸೂಚಿಸಲಿದ್ದಾರೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ತಾತ್ಕಾಲಿಕ ಸಂಪರ್ಕದ ಮಾಹಿತಿ: ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿಟ್ಟುಕೊಳ್ಳಬೇಕು. ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದಾರೆ. ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುತ್ತದೆ. ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕವನ್ನು ವಾಪಸ್ ನೀಡಬೇಕಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ: ಮುಂಗಡ ಬುಕ್ಕಿಂಗ್​ನಲ್ಲಿ ಶೇ.10ರಷ್ಟು ರಿಯಾಯಿತಿ - NWKRTC Bus Service

ETV Bharat Logo

Copyright © 2025 Ushodaya Enterprises Pvt. Ltd., All Rights Reserved.