ETV Bharat / state

ತಂದೆಯ ಅದೃಷ್ಟದ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ - KARNATAKA ASSEMBLY BYPOLLS

ಶಿಗ್ಗಾಂವಿಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಸಿದರು.

KARNATAKA ASSEMBLY BYPOLLS
ತಂದೆಯ ಅದೃಷ್ಟ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : Oct 24, 2024, 1:57 PM IST

ಹಾವೇರಿ: ತಾಯಿ ಹೇಳಿದಂತೆ ಒಳ್ಳೆಯ ಮೂಹರ್ತ ನೋಡಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ತಂದೆ - ತಾಯಿ, ಗುರು-ಹಿರಿಯರ ಆಶೀರ್ವಾದದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತೇವೆ ಎಂದು ಭರತ್ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (ETV Bharat)

ಈಗಾಗಲೇ ಮನೆಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ. ಗುರು - ಹಿರಿಯರನ್ನ ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇನೆ. ತಂದೆ ಮಾಡಿದ ಅಭಿವೃದ್ಧಿ ಕಾರ್ಯಗಳನ್ನ ಮುಂದುವರೆಸಿಕೊಂಡು ಹೋಗುವುದಾಗಿ ಅವರು ಭರವಸೆ ನೀಡಿದರು.

2023ರಲ್ಲಿ ನಮ್ಮ ತಂದೆಯ ಪರವಾಗಿ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ್ದೆ. ಈಗ ನಾನೇ ಮತಯಾಚನೆ ಮಾಡುತ್ತಿದ್ದೇನೆ. ನನಗೆ ಆಶೀರ್ವಾದ ಮಾಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತಿದ್ದೇನೆ. ನನ್ನದೇ ಆದ ವಿಷನ್ ಇದೆ. ಅದರಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಚುನಾವಣೆ ಪ್ರಣಾಳಿಕೆ ಸಹ ಬಿಡುಗಡೆ ಮಾಡುವೆ ಎಂದರು.

KA-25 MC 2691 ಸಂಖ್ಯೆಯ ತಮ್ಮ ತಂದೆಯ ಅದೃಷ್ಟ ವಾಹನದಲ್ಲಿ ಬಂದು ಭರತ್ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಯಾವ ಅಸಮಾಧಾನವೂ ಇಲ್ಲ, ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.