ETV Bharat / state

ಸಂತ್ರಸ್ತೆ ಅಪಹರಣ ಆರೋಪ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಕೆ - RELAXATION FOR BHAVANI REVANNA

ಸಂತ್ರಸ್ತ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಲಾದ ನಿರೀಕ್ಷಣಾ ಜಾಮೀನಿನ ಮೇಲಿನ ಷರತ್ತುಗಳನ್ನು ಹೈಕೋರ್ಟ್​ ಸಡಿಲಿಕೆ ಮಾಡಿದೆ.

bhavani revanna
ಹೈಕೋರ್ಟ್, ಭವಾನಿ ರೇವಣ್ಣ (ETV Bharat)
author img

By ETV Bharat Karnataka Team

Published : Dec 20, 2024, 6:56 AM IST

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾಗಿದ್ದಳೆನ್ನಲಾದ ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ.ಆರ್​. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್​ ಸಡಿಲಿಸಿದೆ. ಮೈಸೂರು ಮತ್ತು ಹಾಸನ ಪ್ರವಾಸ ಮಾಡುವುದಕ್ಕಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ಸಡಿಲ ಮಾಡಿ ಆದೇಶಿಸಿದೆ. ಭವಾನಿ ರೇವಣ್ಣ ಅವರಿಗೆ ಈ ಹಿಂದೆ ನಿರೀಕ್ಷಣಾ ಜಾಮೀನು ಕುರಿತಂತೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ''ಭವಾನಿ ರೇವಣ್ಣ ಅವರು ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದಾರೆ. ಇದೇ ಕಾರಣದಿಂದ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ, ಮೈಸೂರು ಜಿಲ್ಲೆಯ ಕೆ.ಆರ್. ನಗರ ಮತ್ತು ಹಾಸನ ಜಿಲ್ಲೆಗಳಿಗೆ ಪ್ರವಾಸ ಮಾಡದಂತೆ ನಿರ್ಬಂಧ ವಿಧಿಸಿ ಆದೇಶಿಸಿತ್ತು. ಆದ್ದರಿಂದ ಜಾಮೀನು ಷರತ್ತುಗಳನ್ನು ಸಡಿಲಿಸಬಾರದು'' ಎಂದು ಕೋರಿದ್ದರು.

ವಾದ ಆಲಿಸಿದ ಪೀಠ, ಭವಾನಿ ರೇವಣ್ಣನ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿ ಮೈಸೂರು ಮತ್ತು ಹಾಸನ ಪ್ರವೇಶಕ್ಕೆ ಅವಕಾಶ ಕಲ್ಪಿಸಿತು. ಅಲ್ಲದೆ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ವಿಧಿಸಿರುವ ಇತರ ಷರತ್ತುಗಳನ್ನು ಉಲ್ಲಂಘಿಸಬಾರದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಭೋವಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಏಕೆ ವಹಿಸಬಾರದು: ಹೈಕೋರ್ಟ್ ಪ್ರಶ್ನೆ

ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾಗಿದ್ದಾಳೆ ಎನ್ನಲಾದ ಸಂತ್ರಸ್ತೆಯು ಭವಾನಿ ರೇವಣ್ಣರ ಮನೆಯಲ್ಲಿ ಆರು ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ರೇವಣ್ಣ ಅವರ ವಿರುದ್ದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿ: ದರ್ಶನ್​ಗೆ 2 ವಾರ ಮೈಸೂರಿಗೆ ತೆರಳಲು ನ್ಯಾಯಾಲಯ ಅನುಮತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.