ETV Bharat / state

ಬೀದರ್–ಬೆಂಗಳೂರು ವಿಮಾನ ಸೇವೆ ಪುನಾರಂಭ: 2 ವಾರದಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚನೆ - Bidar Bengaluru Flight - BIDAR BENGALURU FLIGHT

ಬೀದರ್-ಬೆಂಗಳೂರು ವಿಮಾನ ಸಂಚಾರ ಪುನಾರಂಭಿಸುವ ಕುರಿತು ಎರಡು ವಾರದೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಚಿವರ ಸಭೆ
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಚಿವರ ಸಭೆ (ETV Bharat)
author img

By ETV Bharat Karnataka Team

Published : Jul 19, 2024, 8:48 AM IST

ಬೆಂಗಳೂರು: ಸ್ಥಗಿತಗೊಂಡಿರುವ ಬೀದರ್–ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸುವ ಕುರಿತಂತೆ ವಿವಿಧ ವಿಮಾನಯಾನ ಸೇವೆ ಪೂರೈಕೆದಾರರೊಂದಿಗೆ ಚರ್ಚಿಸಿ 2 ವಾರಗಳೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ತಿಳಿಸಿದ್ದಾರೆ.

ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, "ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್​ಗೆ ವಿಮಾನಯಾನ ಸೇವೆ ಕಲ್ಪಿಸಬೇಕೆಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಕಳೆದ ಡಿಸೆಂಬರ್​​ನಿಂದ ಮತ್ತೆ ಸಂಪೂರ್ಣ ಸ್ಥಗಿತಗೊಂಡಿದೆ. ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ಅಗ್ಗದ ದರದಲ್ಲಿ ನಾಗರಿಕ ವಿಮಾನಯಾನ ಸೇವೆ ಪುನಾರಂಭಿಸಬೇಕು" ಎಂದು ಹೇಳಿದರು.

ಇದಕ್ಕೆ ಸ್ಪಂದಿಸಿದ ಎಂ.ಬಿ.ಪಾಟೀಲ್, ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಎರಡು ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅತೃಪ್ತಿ; ಕೆಲವು ಸಚಿವರನ್ನು ಕೈ ಬಿಡಲು ಆಗ್ರಹ - CLP Meeting

ETV Bharat Logo

Copyright © 2025 Ushodaya Enterprises Pvt. Ltd., All Rights Reserved.