ETV Bharat / state

ಇ.ಡಿ ನೋಟಿಸ್​ನಿಂದ ಸಿಎಂ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ: ಬಿ.ವೈ. ವಿಜಯೇಂದ್ರ - B Y VIJAYENDRA

ಮುಡಾ ಹಗರಣದಲ್ಲಿ ಬೇಗನೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿಹಾಕುವ ಪ್ರಯತ್ನದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

B Y VIJAYENDRA
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (ETV Bharat)
author img

By ETV Bharat Karnataka Team

Published : Jan 27, 2025, 4:03 PM IST

ಬೆಂಗಳೂರು: "ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ದೊಡ್ಡ ಹಿನ್ನಡೆಯಾಗಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬೇಗನೆ ಬಿ ರಿಪೋರ್ಟ್ ಹಾಕಿಸಿಕೊಂಡು ಪ್ರಕರಣ ಮುಚ್ಚಿಹಾಕುವ ಪ್ರಯತ್ನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ. ಲೋಕಾಯುಕ್ತ ಸಂಸ್ಥೆಯ ತನಿಖೆಯನ್ನು ಮಾಧ್ಯಮಗಳೇ ತೋರಿಸಿವೆ. ರಾತ್ರಿ 8 ರಿಂದ 9 ಗಂಟೆಗೆ ಸಿದ್ದರಾಮಯ್ಯನವರ ಬಾಮೈದ ನೋಟಿಸ್ ಕೊಡದೆ ಇದ್ದರೂ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು" ಎಂದು ದೂರಿದರು.

"ಸಿಎಂ ಕುಟುಂಬಕ್ಕೆ ಎಷ್ಟು ಮುಕ್ತ ವ್ಯವಸ್ಥೆ ಇತ್ತೆಂದು ಅವತ್ತು ಕೂಡ ಬಹಿರಂಗವಾಗಿದೆ. ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಪಾದಯಾತ್ರೆ ಮಾಡಿದ್ದೆವು. ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳ ಧರ್ಮಪತ್ನಿ 14 ನಿವೇಶನ ಹಿಂತಿರುಗಿಸುತ್ತೇವೆ ಎಂದು ರಾತ್ರೋರಾತ್ರಿ ಮುಡಾಗೆ ಪತ್ರ ಬರೆದಿದ್ದರು. ಆ ಪತ್ರದ ಮೂಲಕ ಹಗರಣದಿಂದ ಹೊರಕ್ಕೆ ಬಂದ ಭ್ರಮೆಯಲ್ಲಿ ಮುಖ್ಯಮಂತ್ರಿಯವರೂ ಇದ್ದರು. ಇವತ್ತಿನ ಜಾರಿ ನಿರ್ದೇಶನಾಲಯದ (ಇ.ಡಿ) ನೋಟಿಸ್​ನಿಂದ ಅವರಿಗೆ ಆಘಾತ ಆಗಿರುವುದರಲ್ಲಿ ಎರಡು ಮಾತಿಲ್ಲ" ಎಂದು ಅಭಿಪ್ರಾಯಪಟ್ಟರು.

ಬಿ.ವೈ. ವಿಜಯೇಂದ್ರ (ETV Bharat)

"ಇ.ಡಿಗೆ ಅವರದೇ ಆದ ನಿಯಮಗಳಿರುತ್ತವೆ. ಅದರ ಪ್ರಕಾರ ಅವರು ಮುಂದುವರೆಯುತ್ತಾರೆ. ಇ.ಡಿ. ನೋಟಿಸ್ ರಾಜಕೀಯ ಪ್ರೇರಿತ ಎಂಬುದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾವಿರಾರು ಕೋಟಿ ಮೌಲ್ಯದ ಬಡವರ ಪಾಲಾಗಬೇಕಾದ ನಿವೇಶನಗಳ ಅಕ್ರಮ ಹಂಚಿಕೆ ನಡೆದಿತ್ತು. ಈ ದೊಡ್ಡ ಹಗರಣದ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ" ಎಂದು ಹೇಳಿದರು.

"ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆತುರಾತುರವಾಗಿ ಲೋಕಾಯುಕ್ತ ಸಂಸ್ಥೆಯಿಂದ ಬಿ ರಿಪೋರ್ಟ್ ಪಡೆದು ಮುಡಾ ಹಗರಣದಿಂದ ಹೊರಕ್ಕೆ ಬರಬಹುದೆಂಬ ಲೆಕ್ಕಾಚಾರದಲ್ಲಿದ್ದರು. ಇದೇ ಸಂದರ್ಭದಲ್ಲಿ ಇ.ಡಿ. ಮುಖ್ಯಮಂತ್ರಿಗಳ ಧರ್ಮಪತ್ನಿಗೂ ನೋಟಿಸ್ ಕೊಟ್ಟಿದೆ ಹಾಗೂ ತನಿಖೆಗೆ ಹಾಜರಾಗಲು ತಿಳಿಸಿದೆ. ಜೊತೆಗೆ ಸಚಿವ ಬೈರತಿ ಸುರೇಶ್‍ರಿಗೂ ಇ.ಡಿ. ನೋಟಿಸ್ ಕೊಟ್ಟಿದೆ. ಹಾಗಾಗಿ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಧರ್ಮಪತ್ನಿ ಅವರು ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ" ಎಂದರು.

ಲೋಕಾಯುಕ್ತ ಕೊಟ್ಟ ವರದಿಯ ಮಾಹಿತಿ ಇಲ್ಲ : "ರಾಜ್ಯ ಹೈಕೋರ್ಟ್​ಗೆ ಲಕೋಟೆಯಲ್ಲಿ ವರದಿ ನೀಡಿದ ಮಾಹಿತಿಗಳು ಬರುತ್ತಿವೆ. ನಾನು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ರಾಜಕೀಯ ಪ್ರೇರಿತ ಇ.ಡಿ. ಎಂದು ಅವರು ಹೇಳಿದ್ದಾರೆ. ಅವರ ಮುಖದಲ್ಲಿ ಮಂದಹಾಸವೂ ಕಾಣುತ್ತಿದೆ. ಅಬ್ಬಾ ಸಿದ್ದರಾಮಯ್ಯನವರ ಕುಟುಂಬಕ್ಕೆ ಇ.ಡಿ. ನೋಟಿಸ್ ಕೊಟ್ಟಿದೆ ಎಂಬ ಸಂತೋಷ ಅವರ ಮುಖದಲ್ಲಿತ್ತು" ಎಂದು ಹೇಳಿದರು.

ಇದನ್ನೂ ಓದಿ: ಮುಡಾ ಪ್ರಕರಣ; ಪಾರ್ವತಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್​ಗೆ ಇ.ಡಿ ನೋಟಿಸ್​​

ಇದನ್ನೂ ಓದಿ: ಮುಡಾ ಪ್ರಕರಣ : ಪಾರ್ವತಿ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್‌ಗೆ ಇ.ಡಿ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.