ETV Bharat / state

ಚಿಕ್ಕಮಗಳೂರಲ್ಲಿ ಬೈಕ್​ ರೈಡ್​: ಪೊಲೀಸ್​ ತಂಡ ರಚನೆ - POLICE TAKE ACTION

author img

By ETV Bharat Karnataka Team

Published : Sep 15, 2024, 7:37 PM IST

Updated : Sep 15, 2024, 8:21 PM IST

ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮೂವರು ಯುವಕರು ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ಘಟನೆ ನಡೆದಿದೆ. ಆರೋಪಿ ಯುವಕರನ್ನು ಬಂಧಿಸಲು ತಂಡ ರಚನೆ ಮಾಡಲಾಗಿದೆ ಎಂದು ಎಎಸ್​ಪಿ ಜಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್​ ರೈಡ್
ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್​ ರೈಡ್ (ETV Bharat)

ಚಿಕ್ಕಮಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರು ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.

ಬೈಕಿನಲ್ಲಿ ಮೂವರು ಯುವಕರು ಪ್ಯಾಲೆಸ್ತೀನ್ ಧ್ವಜ ಹಿಡಿದು ದಂಟರ ಮಕ್ಕಿ ಭಾಗದಿಂದ ನಗರದ ಹನುಮಂತಪ್ಪ ವೃತ್ತದ ಕಡೆ ಓಡಾಡಿದ್ದಾರೆ. ಸದ್ಯ ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇನ್ನು ಈ ವಿಡಿಯೋ ಗಮನಿಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಕಾರ್ಯಕರ್ತರು ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದವರ ವಿರುದ್ಧ ಧಿಕ್ಕಾರ ಕೂಗಿ, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಅಗ್ರಹಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, "ಪ್ಯಾಲೆಸ್ತೀನ್ ಬಾವುಟ ಹಿಡಿದು ಸಂಚಾರ ಮಾಡಿರುವ ಬೈಕ್​ನ​ ನಂಬರ್ ಪತ್ತೆಯಾಗಿದೆ. ಯುವಕರನ್ನು ಬಂಧಿಸಲು ಒಂದು ತಂಡ ರಚನೆ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ" ಎಂದು ತಿಳಿಸಿದರು.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ಭಾಗಿಯಾಗಿದ್ದ ಕೇರಳ ಮೂಲದ ಇಬ್ಬರ ಬಂಧನವಾಗಿದೆ: ಸಚಿವ ಚಲುವರಾಯಸ್ವಾಮಿ - NAGAMANGALA RIOTS

Last Updated : Sep 15, 2024, 8:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.