ETV Bharat / state

ಪ್ರಚಾರದ ವೇಳೆ ಶೋಭಾ ಕರಂದ್ಲಾಜೆಗೆ ಸೇರಿದ್ದ ಕಾರಿಗೆ ಡಿಕ್ಕಿಯಾಗಿ ವ್ಯಕ್ತಿ ಸಾವು - Biker Dies

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ ಪ್ರಚಾರದ ವೇಳೆ ಅವರಿಗೆ ಸೇರಿದ್ದ ಕಾರಿಗೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

Prakash
ಪ್ರಕಾಶ್
author img

By ETV Bharat Karnataka Team

Published : Apr 8, 2024, 3:36 PM IST

Updated : Apr 8, 2024, 5:47 PM IST

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ

ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ರ್‍ಯಾಲಿ ವೇಳೆ ಅವರಿಗೆ ಸೇರಿದ್ದ ಕಾರಿಗೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಕೆ.ಆರ್.ಪುರಂನ ಗಣೇಶ ದೇವಸ್ಥಾನದ ಬಳಿ ನಡೆದಿದೆ. ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಕಾಶ್ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕರಂದ್ಲಾಜೆ ಅವರ ಪ್ರಚಾರದ ರ್‍ಯಾಲಿಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಭಾಗಿಯಾಗಿದ್ದರು. ಈ ವೇಳೆ ನಿಂತಿದ್ದ ಕಾರೊಂದರ ಬಾಗಿಲು ತೆರೆಯುವ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಪ್ರಕಾಶ್ ಅವರ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಆ ರಭಸಕ್ಕೆ ನೆಲಕ್ಕೆ ಬಿದ್ದ ಅವರ ಮೇಲೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಹರಿಯಿತು. ತೀವ್ರವಾಗಿ ಗಾಯಗೊಂಡಿದ್ದ ಪ್ರಕಾಶ್ ಅವರನ್ನು ತಕ್ಷಣ ಕೆ.ಆರ್.ಪುರಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

ದ್ವಿಚಕ್ರ ವಾಹನ
ದ್ವಿಚಕ್ರ ವಾಹನ

ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ, "ನಾವೆಲ್ಲರೂ ರ್‍ಯಾಲಿಯಲ್ಲಿ ಮುಂದೆ ಹೋಗಿದ್ದೆವು. ಈ ವೇಳೆ ರಸ್ತೆ ಬಳಿ ನಿಂತಿದ್ದ ಕಾರಿಗೆ ಪ್ರಕಾಶ್ ಅವರ ಬೈಕ್​ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅವರ ಮೇಲೆ ಬಸ್​ ಹರಿದು ಹೋಗಿದೆ. ತಲೆ ಅಥವಾ ಇನ್ನಿತರ ಭಾಗಗಳಿಗೆ ಏನಾದರೂ ಗಾಯವಾಗಿ ಮೃತರಾದರಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದ ತಿಳಿದು ಬರಬೇಕಿದೆ. ಆದಷ್ಟು ಬೇಗ ಮರಣೋತ್ತರ ಪರೀಕ್ಷೆ ನಡೆಸುವಂತೆ ಪೊಲೀಸ್​ ಹಾಗೂ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿದು ಬರಲಿದೆ. ಅವರ ಸಾವು ನಮಗೆ ನೋವು ತರಿಸಿದೆ. ಮೃತ ಪ್ರಕಾಶ್​ ನಮ್ಮ ಪಕ್ಷದ ಅತ್ಯಂತ ನಿಷ್ಠಾವಂತ ಕಾರ್ಯಕರ್ತ ಆಗಿದ್ದರು. ದಿನದ 24 ಗಂಟೆಗಳ ಕಾಲ ನಮ್ಮ ಜೊತೆ ಇರುತ್ತಿದ್ದರು. ಮೃತ ಪ್ರಕಾಶ್​ ಅವರ ಕುಟುಂಬದೊಂದಿಗೆ ನಾವೆಲ್ಲರೂ ಇದ್ದೇವೆ. ಪಕ್ಷದ ವತಿಯಿಂದ ಕುಟುಂಬಕ್ಕೆ ಪರಿಹಾರದ ವ್ಯವಸ್ಥೆ ಮಾಡಲಾಗುವುದು" ಎಂದರು.

ಇದನ್ನೂ ಓದಿ: ಹೊಳಲ್ಕೆರೆ ಬಳಿ ಭೀಕರ ರಸ್ತೆ ಅಪಘಾತ; ಬಸ್​ ಪಲ್ಟಿಯಾಗಿ ಮೂವರು ಸಾವು - Bus Accident

Last Updated : Apr 8, 2024, 5:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.