ETV Bharat / state

ಗ್ರಾ.ಪಂ.ಗಳಲ್ಲಿ ಜನನ, ಮರಣ ನೋಂದಣಿ ಜುಲೈ 1ರಿಂದ ಪ್ರಾರಂಭ: ಶುಲ್ಕ ಮಾಹಿತಿ ಹೀಗಿದೆ - BIRTH AND DEATH REGISTRATION - BIRTH AND DEATH REGISTRATION

ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜುಲೈ 1 ರಿಂದಲೇ ಜಾರಿಗೆ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಗ್ರಾಪಂಗಳಲ್ಲಿ ಜನನ, ಮರಣ ನೋಂದಣಿ ಜುಲೈ 1ರಿಂದ ಪ್ರಾರಂಭ: ಸಚಿವ ಪ್ರಿಯಾಂಕ್ ಖರ್ಗೆ
ಗ್ರಾಪಂಗಳಲ್ಲಿ ಜನನ, ಮರಣ ನೋಂದಣಿ ಜುಲೈ 1ರಿಂದ ಪ್ರಾರಂಭ: ಸಚಿವ ಪ್ರಿಯಾಂಕ್ ಖರ್ಗೆ (ETV Bharat)
author img

By ETV Bharat Karnataka Team

Published : Jun 29, 2024, 6:02 PM IST

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತ್​ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತ್​ಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತ್​ಗಳಲ್ಲಿ ಗ್ರಾಮ ಪಂಚಾಯತ್​ ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್​ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಜನನ, ಮರಣ ಪ್ರಮಾಣ ಪತ್ರದ ಶುಲ್ಕ ಮಾಹಿತಿ ಹೀಗಿದೆ: ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿನ ಜನನ, ಮರಣ ಸಂಬಂಧ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ ಪ್ರಸಂಗಗಳಲ್ಲಿ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. 21 ದಿನಗಳ ತರುವಾಯ ಮತ್ತು 30 ದಿನಗಳ ಒಳಗಿನ ಘಟನೆಗಳನ್ನು ನಿಯಮಗಳಂತೆ 2 ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು. 30 ದಿನಗಳ ತರುವಾಯ ಒಂದು ವರ್ಷದೊಳಗೆ ವರದಿಯಾಗುವ ಜನನ, ಮರಣಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ 5 ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು. ಒಂದು ವರ್ಷ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ (Presidency Magistrate) ಅವರ ಆದೇಶದೊಂದಿಗೆ 10 ರೂ. ತಡೆ ಶುಲ್ಕ ಪಡೆದು ನೋಂದಣಿ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಕಂಡಕ್ಟರ್ ವಿರುದ್ಧ ಪ್ರಯಾಣಿಕ ದೂರು: ಚಿಲ್ಲರೆ ಹಣ ಹಿಂದಿರುಗಿಸಿದ ಬಿಎಂಟಿಸಿ - bmtc paid retail

ಗ್ರಾಮ ಪಂಚಾಯತ್​ಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ 72 ಸೇವೆಗಳು ಲಭ್ಯ ಇವೆ. ಜನನ, ಮರಣ ನೋಂದಣಿ 73ನೇ ಸೇವೆಯಾಗಿ ಸೇರ್ಪಡೆಗೊಳ್ಳುತ್ತಿದೆ. ಜನನ ನೋಂದಣಿ, ಜನನ ಪ್ರಮಾಣ ಪತ್ರ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ ಹೆಸರು ಸೇರ್ಪಡೆ, ನಿರ್ಜೀವ ಜನನ ನೋಂದಣಿ, ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ, ಮರಣ ನೋಂದಣಿ, ಮರಣ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ಮರಣ ಪ್ರಮಾಣ ಪತ್ರ ವಿತರಣೆ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಜನನ, ಮರಣ ನೋಂದಣಿ ಸಂಬಂಧದಲ್ಲಿ ಸಂದೇಹ/ಸ್ಪಷ್ಟೀಕರಣ ಅವಶ್ಯಕತೆಯಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಹಾಗೂ ಇ-ಮೇಲ್‌ crbdkar@gmail.com/ejanmahelpdesk@gmail.com ಮತ್ತು ಇ-ಜನ್ಮ ಸಹಾಯವಾಣಿ 1800-425-6578 ಸಂಖ್ಯೆಗೆ ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಡೆಂಗ್ಯೂಗೆ ಯುವಕ ಸೇರಿ ಇಬ್ಬರು ಬಲಿ; ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ಕೇಸ್​ ದಾಖಲು - DENGUE IN KARNATAKA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.