ETV Bharat / state

ಜಾಗ ಕೊಟ್ಟಿರುವುದು ತಪ್ಪೆನ್ನುವುದಾದರೆ ನಮಗೆ ಪರಿಹಾರ ಕೊಡಲಿ: ಸಿಎಂ ಸಿದ್ದರಾಮಯ್ಯ - MUDA Plot Allotment - MUDA PLOT ALLOTMENT

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jul 4, 2024, 7:05 PM IST

Updated : Jul 4, 2024, 8:37 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: "ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ?. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ" ಎಂದರು.

ವಿಧಾನಸೌಧದಲ್ಲಿಂದು ಸಚಿವ ಸಂಪುಟ ಸಭೆ ಮುಗಿದ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

"ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ?, ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯಪ್ರೇರಿತ ಆಪಾದನೆ" ಎಂದು ಹೇಳಿದರು.

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, "ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. 2023ರ ಅಕ್ಟೋಬರ್‌ನಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟು ಬಿಡಲಿ" ಎಂದರು.

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತ ತೆಗೆದುಕೊಂಡು ಬಂದಿದ್ದಾರೆಯೇ ಎಂಬ ಪ್ರಶ್ನೆಗೆ, ಕಡತ ತಂದಿಲ್ಲ ಎಂದರು.

ಇದನ್ನೂ ಓದಿ: "ನಾನು ನನ್ನ ಅವಧಿಯಲ್ಲಿ 7 ಪ್ರಕರಣ ಸಿಬಿಐಗೆ ಕೊಟ್ಟಿದ್ದೇನೆ, ಬಿಜೆಪಿ ಅಧಿಕಾರಾವಧಿಯಲ್ಲಿ ಒಂದಾದ್ರು ಸಿಬಿಐಗೆ ಕೊಟ್ಟಿದ್ರಾ: ಸಿಎಂ ಪ್ರಶ್ನೆ - CM Siddaramaiah

Last Updated : Jul 4, 2024, 8:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.