ETV Bharat / state

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಮಾಜಿ ಪ್ರಧಾನಿ, ಮಾಜಿ ಸಿಎಂಗಳಿಂದ ಸಂತಾಪ - MP Srinivasa Prasad no more - MP SRINIVASA PRASAD NO MORE

ಸಂಸದ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್, ಬಿಜೆಪಿ ಮಾಜಿ ಸಿಎಂಗಳು ಸೇರಿದಂತೆ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಂತಾಪ
ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಸಂತಾಪ
author img

By ETV Bharat Karnataka Team

Published : Apr 29, 2024, 10:09 AM IST

Updated : Apr 29, 2024, 12:12 PM IST

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ಎಕ್ಸ್​​ನಲ್ಲಿ ಸಂತಾಪ ಸೂಚಿಸಿದ ಮಾಜಿ ಪ್ರಧಾನಿ : "ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಕಂಬನಿ ಮಿಡಿದಿದ್ದಾರೆ.

'ಶ್ರೀನಿವಾಸ​ ನಿಧನ ದಿಗ್ಭ್ರಮೆ ಮೂಡಿಸಿದೆ'-ಬಿಎಸ್​ವೈ: "ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಸಂಸದರು, ಆತ್ಮೀಯರಾದ ವಿ. ಶ್ರೀನಿವಾಸ​ ಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ‌ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ" ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ: "ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ನಮ್ಮ ಪಕ್ಷದ ಸಂಸದರಾದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್​​ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ದುಃಖವಾಗಿದೆ. ಶಾಸಕರಾಗಿ, ಸಂಸದರಾಗಿ ಸುಮಾರು ಐವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಾನುರಾಗಿಯಾಗಿದ್ದರು. ಶ್ರೀನಿವಾಸ ಪ್ರಸಾದ ಅವರ ಅಗಲಿಕೆಯಿಂದ ರಾಜ್ಯದ ಒಬ್ಬ ಹಿರಿಯ ನಾಯಕ ಹಾಗೂ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ" ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಹೆಚ್​ಡಿಕೆ ಸಂತಾಪ: "ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು ಎಂದು ಹೇಳಿದ್ದಾರೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ" ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಸಂತಾಪ: "ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿ ವಿ. ಶ್ರೀನಿವಾಸ ಪ್ರಸಾದ್​ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು, ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು".

"ಪ್ರಸ್ತುತ ಕಾಲಮಾನದಲ್ಲಿ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ದಲಿತ ನಾಯಕ, ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ - V Srinivas Prasad passed away

ಇದನ್ನೂ ಓದಿ: 14 ಚುನಾವಣೆ, 7 ಪ್ರಧಾನಿಗಳನ್ನು ಕಂಡಿದ್ದ ಪ್ರಸಾದ್: ಸೋಲಿನಿಂದ ಆರಂಭ, ಗೆಲುವಿನಿಂದ ರಾಜಕೀಯ ಅಂತ್ಯ - Srinivasa Prasad

Last Updated : Apr 29, 2024, 12:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.