ETV Bharat / state

ಸಂಜಯ್ ಪಾಟೀಲ್ ಹೇಳಿಕೆಗೂ ಲಿಂಗಾಯತ ಸಮಾಜಕ್ಕು ಏನು ಸಂಬಂಧ; ಶೆಟ್ಟರ್ ಪ್ರಶ್ನೆ - BJP candidate Jagadish Shettar - BJP CANDIDATE JAGADISH SHETTAR

ಲಕ್ಷ್ಮಿ ಹೆಬ್ಬಾಳ್ಕರ್ ಕುರಿತಂತೆ ಸಂಜಯ್ ಪಾಟೀಲ್ ಹೇಳಿಕೆ ಬಗ್ಗೆ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಮಾತನಾಡಿದರು.

bjp-candidate-jagadish-shettar
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್
author img

By ETV Bharat Karnataka Team

Published : Apr 14, 2024, 6:49 PM IST

ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

ಬೆಳಗಾವಿ : ಎಲ್ಲ ವಿಚಾರಗಳನ್ನು ಸಮಾಜಕ್ಕೆ, ಸಮುದಾಯಕ್ಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನೋದು ನನಗೆ ತಿಳಿಯುತ್ತಿಲ್ಲ. ಲಿಂಗಾಯತ ‌ಸಮಾಜಕ್ಕೆ, ಸಂಜಯ್ ಪಾಟೀಲ್​ ಹೇಳಿಕೆಗೂ ಏನು ಸಂಬಂಧ? ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ.

ಸಂಜಯ್ ಪಾಟೀಲ್ ಹೇಳಿಕೆ ಲಿಂಗಾಯತ ‌ಸಮಾಜಕ್ಕೆ ಮಾಡಿದ ಅನ್ಯಾಯ ಎಂಬ ಹೆಬ್ಬಾಳ್ಕರ್ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಉತ್ತರಿಸಿದ ಅವರು, ಹೇಳಿಕೆ ತಪ್ಪಾಗಿದ್ದರೆ ತಪ್ಪು ಎಂದು ಹೇಳೋಣ. ಸಮುದಾಯಕ್ಕೆ ಹೋಗಿ ಮುಟ್ಟಿಸುವುದು ಸರಿಯಲ್ಲ ಎಂದರು.

ನರೇಂದ್ರ ಮೋದಿ ಬಗ್ಗೆ, ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್‌ನವರು ಕೀಳಾಗಿ ಮಾತನಾಡಿದ್ದಾರೆ. ಏಕವಚನದಲ್ಲಿ ಸಾಕಷ್ಟು ‌ಸಲ ನಮ್ಮ ನಾಯಕರ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿದ್ದು ಇದೆ. ಹೀಗಾಗಿ ಸ್ವತಃ ಸಂಜಯ್ ಪಾಟೀಲ್ ಅವರೇ ಹೆಬ್ಬಾಳ್ಕರ್​ಗೆ ನೀಡಿರುವ ಹೇಳಿಕೆಯ ಬಗ್ಗೆ ಉತ್ತರ ನೀಡುತ್ತಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಸಂಜಯ್‌ ಪಾಟೀಲ್ ‌ಆಡಿರುವ ಮಾತುಗಳು ಬಿಜೆಪಿ ಅಜೆಂಡಾ ‌ಅಲ್ಲವೇ ಅಲ್ಲ. ಸಂಜಯ್ ಪಾಟೀಲ್ ಜೊತೆಗೆ ಮತ್ತೊಮ್ಮೆ ಸಮಾಲೋಚನೆ ಮಾಡುತ್ತೇನೆ. ನಾನೂ ವೇದಿಕೆ ಮೇಲೆ ಇದ್ದೆ. ಆದರೆ ಸಂಜಯ್ ಪಾಟೀಲ್ ಇದಕ್ಕೆ ಸ್ಪಷ್ಟೀಕರಣ ನೀಡಿದರೆ ಉತ್ತಮ. ನಾವು ಎಲ್ಲ ಕಾರ್ಯಕ್ರಮಗಳಲ್ಲೂ ವೇದಿಕೆ ಮೇಲೆ ಇರುತ್ತೇವೆ. ಎಲ್ಲರ ಭಾಷಣ ಗ್ರಹಿಸಿಕೊಳ್ಳಲು ಸಾಧ್ಯವಾಗಲ್ಲ. ಹೀಗಾಗಿ ಸಂಜಯ್ ಪಾಟೀಲ್ ಜೊತೆಗೆ ಸಮಾಲೋಚನೆ ‌ಮಾಡಿ ನಿರ್ಧಾರಕ್ಕೆ ಬರುತ್ತೇನೆ ಎಂದು ಅವರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯ ಹಣದಿಂದ ಹಳ್ಳಿಯ ಹೆಣ್ಣುಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ, ಅವರ ಹೇಳಿಕೆಯನ್ನು ನಾನು ನೋಡಿಲ್ಲ ಮತ್ತು ಕೇಳಿಲ್ಲ. ಇದಕ್ಕೆ ಕುಮಾರಸ್ವಾಮಿ ಅವರೇ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗಾಗಿ ಇಂದು ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆಯಾಗಿದೆ. 10 ವರ್ಷಗಳ ಕಾಲ ಮೋದಿ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಮೂಲಕ ಎಲ್ಲ ವರ್ಗದ ಜನರ ಪ್ರೀತಿಗೆ ನರೇಂದ್ರ ಮೋದಿ ಪಾತ್ರವಾಗಿದ್ದಾರೆ. ಎಲ್ಲ ವರ್ಗಗಳ ಜನರನ್ನು ‌ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ‌ರಚಿಸಲಾಗಿದೆ ಎಂದರು.

ಹಿಂದೆ ಪ್ರಣಾಳಿಕೆಯಲ್ಲಿ‌ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಕೂಡ ನಮ್ಮ ಸರ್ಕಾರ ಈಡೇರಿಸಿದೆ. ಈ‌‌ ಚುನಾವಣೆಗಾಗಿ ಬಿಡುಗಡೆಗೊಂಡಿರುವ ಪ್ರಣಾಳಿಕೆಯನ್ನು ನಾನು ಸ್ವಾಗತಿಸುವೆ ಎಂದು ಜಗದೀಶ ಶೆಟ್ಟರ್ ಅವರು ತಿಳಿಸಿದರು.

ಇದನ್ನೂ ಓದಿ : ನನಗೆ ಅಲ್ಲ, ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ: ಸಂಜಯ್ ಪಾಟೀಲ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ - Lakshmi Hebbalkar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.