ಬಳ್ಳಾರಿ: ಬಿಸಿಲನಾಡು ಬಳ್ಳಾರಿಯಲ್ಲಿ ಇವತ್ತು ಎರಡು ಪಕ್ಷಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಕೆಂಡದಂತ ಬಿಸಿಲ ಮಧ್ಯೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು.
ಬಿಜೆಪಿಯಿಂದ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀರಾಮುಲು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮುನ್ನ, ನಗರದ ಎಸ್ಪಿ ಸರ್ಕಲ್‌ನಿಂದ ಬೃಹತ್ ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ತೆರಳಿದ ಅವರು ದುರ್ಗಮ್ಮ ದೇವಸ್ಥಾನಕ್ಕೆ ಬಂದು, ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಅಂಡರ್ ಬ್ರಿಡ್ಜ್ ಮೂಲಕ ಡಬಲ್ ರಸ್ತೆಯ ರಾಯಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದರು.
ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎನ್.ರವಿಕುಮಾರ್, ಮಾಜಿ ಸಚಿವ ಆನಂದ್ ಸಿಂಗ್, ಮಾಜಿ ಶಾಸಕರುಗಳಾದ ಜಿ.ಸೋಮಶೇಖರ್ ರೆಡ್ಡಿ, ಟಿ.ಹೆಚ್.ಸುರೇಶ್ ಬಾಬು, ಶಾಸಕ ನೇಮಿರಾಜ್ ನಾಯ್ಕ್, ಕೃಷ್ಣಾ ನಾಯ್ಕ್, ವೈ.ಎಂ.ಸತೀಶ್, ಮುಖಂಡರಾದ ಗಾಲಿ ಲಕ್ಷ್ಮಿ ಅರುಣಾ, ಶ್ರೀರಾಮುಲು ಅವರ ಪತ್ನಿ ಭಾಗ್ಯಲಕ್ಷ್ಮಿ, ದೀಪಾ ಸುರೇಶ್ ಬಾಬು, ನಟಿ ಶೃತಿ ಸೇರಿದಂತೆ ಇನ್ನಿತರರು ಇದ್ದರು.
ಇನ್ನು, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇ.ತುಕಾರಾಂ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ನಗರದ ಅಧಿದೇವತೆ ಕನಕ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು.
ಇದನ್ನೂ ಓದಿ: ಶಿವಮೊಗ್ಗ ಲೋಕಸಭೆಗೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ: ಎದುರಾಳಿಗಳಿಗೆ ತಿರುಗೇಟು - Eshwarappa Nomination