ETV Bharat / state

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು - Yathindra Siddaramaiah

author img

By ETV Bharat Karnataka Team

Published : Mar 29, 2024, 10:57 PM IST

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.

Etv Bharat
Etv Bharat

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವೈಯಕ್ತಿಕವಾಗಿ ಟೀಕಿಸಿದ್ದಾರೆಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ನಿಯೋಗ ದೂರು ನೀಡಿದೆ. ಯತೀಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ನೀಡಿತು. ಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತುಗಳ ಕುರಿತು ವಿವರ ನೀಡಿ ಕ್ರಮಕ್ಕೆ ಮನವಿ ಮಾಡಿದೆ. ಚುನಾವಣಾ ಆಯೋಗಕ್ಕೆ ದೂರು ಬಳಿಕ ಮಾತನಾಡಿದ ಪರಿಷತ್ ಸದಸ್ಯ ಎನ್.ರವಿಕುಮಾರ್, ''ಮಾರ್ಚ್​ 28ರಂದು ಸಿದ್ದರಾಮಯ್ಯ ಅವರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ವೈಯಕ್ತಿಕ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಗೂಂಡಾ ಇದ್ದಾರೆ, ಕೊಲೆಗಡುಕರಿದ್ದಾರೆ ಅಂತ ಹೇಳಿದ್ದು, ಆ ಆರೋಪವನ್ನು ಅವರು ಪ್ರೂವ್ ಮಾಡಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿದೆ'' ಎಂದು ತಿಳಿಸಿದರು.

''ಗೃಹ ಸಚಿವ ಹಾಗೂ ಪ್ರಧಾನಿ ಬಗ್ಗೆ ನಿಂದನೀಯ ಪದ ಬಳಕೆ ಖಂಡನೀಯ. ಈ ಬಗ್ಗೆ ದೂರು ನೀಡಿದ್ದೇವೆ.153a, 153b, 171c, 295a, 505(2) ಈ ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿ ಮಾತನಾಡಿದ್ದಾರೆ. ಈ ಹಿಂದೆ ಈ ರೀತಿ ಮಾತನಾಡಿದವರ ವಿರುದ್ಧ ಕ್ರಮ ಆಗಿದೆ. ಇವರ ವಿರುದ್ಧ ಕ್ರಮ ಆಗಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡಲಿದ್ದೇವೆ'' ಎಂದು ಎಚ್ಚರಿಸಿದರು.

ಚಿಕ್ಕೋಡಿ ಜಿಲ್ಲೆಯಲ್ಲಿ ಮೆಟೀರಿಯಲ್ ತೆಗೆದುಕೊಂಡು ಹೋಗುವಾಗ ಟೋಲ್ ಬಳಿ ವಾಹನ ತಡೆದು, ಮೆಟೀರಿಯಲ್ಸ್ ಸುಟ್ಟು ಹಾಕಿದ್ದಾರೆ. ಕೃಷ್ಣಾ ರಿವರ್ ಚೆಕ್ ಪೋಸ್ಟ್ ಬಳಿ ತಡೆದಿದ್ದಾರೆ. ವಸ್ತುಗಳನ್ನು ಸುಟ್ಟು ಹಾಕಿದ್ದಾರೆ. ಪಕ್ಷದ ಧ್ವಜ ಸೇರಿದಂತೆ ಬೇರೆ ಬೇರೆ ವಸ್ತುಗಳಿತ್ತು. ಅದನ್ನ‌ ಸಾಗಿಸಲು ಅನುಮತಿ ಇತ್ತು. ಅಧಿಕಾರಿಗಳು ಅದನ್ನ ಸೀಜ್ ಮಾಡಬಹುದಿತ್ತು. ಆದರೆ, ಆ ಅಧಿಕಾರಿ ಕಾಂಗ್ರೆಸ್ ಬೆಂಬಲಿಗ ಇರಬೇಕು. ಅವರು ಸುಟ್ಟು ಹಾಕಿದ್ದಾರೆ ಇದನ್ನು ಆಯೋಗದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರಾಜಾಜಿನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಟೇಡಿಯಂ ಇದೆ. ಅದರೊಳಗೆ ವಾಜಪೇಯಿ ಅವರ ಪುತ್ಥಳಿ ಇದೆ. ಅದನ್ನ ಬಟ್ಟೆಯಿಂದ ಮುಚ್ಚಿಟ್ಟಿದ್ದಾರೆ. ಮಂತ್ರಿ ಮಾಲ್ ಮುಂದೆ ರಾಜೀವ್ ಗಾಂಧಿ ದೊಡ್ಡ ಸ್ಟ್ಯಾಚು ಇದೆ. ಅದನ್ನು ಹಾಗೆಯೇ ಬಿಡಲಾಗಿದೆ. ಇದು ಕಾಂಗ್ರೆಸ್ ದುರಾಡಳಿತದ ರೀತಿ ಇದೆ. ಈ ಬಗ್ಗೆ ದೂರು ನೀಡಿದ್ದೇವೆ ಎಂದರು.

ಬಿಎಸ್​ವೈ ಅಸಮಾಧಾನ: ''ನಮ್ಮ ಹಿರಿಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಖಂಡನಾರ್ಹ ಮಾತ್ರವಲ್ಲ, ತೀರಾ ಕೀಳುಮಟ್ಟದ್ದಾಗಿದೆ. ಒಬ್ಬ ಮಾಜಿ ಶಾಸಕರಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮಗನಾಗಿ ಕನಿಷ್ಠ ಘನತೆಯನ್ನೂ ಕೂಡ ಅವರು ಮರೆತಂತಿದೆ'' ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರು ಹಾಗೂ ಕರ್ನಾಟಕದ ಇನ್ನಿತರ ಭಾಗಗಳಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಚ್ಚಳವಾಗಿದೆ. ಆ ಹತಾಶೆಯಿಂದ ಯತೀಂದ್ರ ಅವಹೇಳನಕಾರಿ ಪದ ಪ್ರಯೋಗಕ್ಕೆ ಮುಂದಾಗಿದ್ದಾರೆ. ದೇಶದ ಗೃಹ ಸಚಿವರ ಕುರಿತಾದ ಅವರ ಕೀಳುಮಟ್ಟದ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಅವರು ಕೂಡಲೇ ಕ್ಷಮೆ ಕೇಳಬೇಕು. ಇನ್ನು ಮುಂದಾದರೂ ಸಾರ್ವಜನಿಕ ಜೀವನದಲ್ಲಿ ಸಭ್ಯತೆಯಿಂದ ವರ್ತಿಸುತ್ತಾರೆ ಎಂದು ನಿರೀಕ್ಷಿಸುತ್ತೇನೆ'' ಎಂದು ಬಿಎಸ್​ವೈ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ - Yathindra Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.