ಬೆಂಗಳೂರು: ಚುನಾವಣೆ ಪ್ರಚಾರದ ಭರಾಟೆ ನಡುವೆ ಬೆಂಗಳೂರು ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಅವರು ಮತದಾರರಿಗೆ ಉಡುಗೊರೆ ನೀಡಿ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಶಾಸಕ ಸುರೇಶ್ ಕುಮಾರ್, ಸಿ.ಕೆ. ರಾಮಮೂರ್ತಿ ಮತ್ತು ಛಲವಾದಿ ನಾರಾಯಣಸ್ವಾಮಿ ಒಳಗೊಂಡ ಬಿಜೆಪಿ ನಿಯೋಗ ಭೇಟಿ ನೀಡಿತು. ಕೊರಿಯರ್ ಮೂಲಕ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಅವರು ಗಿಫ್ಟ್ ನೀಡಿ ಆಮಿಷ ಒಡ್ಡಿದ್ದಾರೆಂದು ಆರೋಪಿಸಿ ಮತದಾರರಿಗೆ ಕಳುಹಿಸಲ್ಪಟ್ಟಿರುವ ಗಿಫ್ಟ್ ಬಾಕ್ಸ್ನ್ನು ಚುನಾವಣಾ ಆಯೋಗಕ್ಕೆ ನೀಡಿ ದೂರು ಸಲ್ಲಿಕೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಮತದಾರರಿಗೆ ಆಮಿಷವೊಡ್ಡುವ ಸಲುವಾಗಿ ಗಿಫ್ಟ್‌ಗಳನ್ನು ಹಂಚುತ್ತಿರುವ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಿಯೋಗ ಆಗ್ರಹಿಸಿತು. ದೂರು ಸ್ವೀಕರಿಸಿದ ಚುನಾವಣಾಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದನ್ನೂಓದಿ:'ಬಿಜೆಪಿ ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ' - Gopalakrishna Beluru