ETV Bharat / state

ಬಿಜೆಪಿ - ಜೆಡಿಎಸ್ ಸಮನ್ವಯ ಸಭೆ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜು - BJP JDS Meeting - BJP JDS MEETING

ಮುಂಬರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಕುರಿತಂತೆ ಬಿಜೆಪಿ - ಜೆಡಿಎಸ್ ಸಮನ್ವಯ ಸಭೆ ನಡೆಯಿತು.

BJP-JDS coordination meeting
ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ (ETV Bharat)
author img

By ETV Bharat Karnataka Team

Published : Jul 13, 2024, 7:04 AM IST

ಬೆಂಗಳೂರು: ಸೋಮವಾರದಿಂದ ಆರಂಭಗೊಳ್ಳಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಉಭಯ ಸದನದಲ್ಲಿಯೂ ಸರ್ಕಾರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನೊಳಗೊಂಡ ಸಮನ್ವಯ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಗೆ ಗೈರಾಗಿದ್ದರು.

ನಗರದ ಖಾಸಗಿ ಹೋಟೆಲ್​​ನಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ, ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದರು. ಆದರೆ, ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಗೈರುಹಾಜರಿ ಎದ್ದುಕಾಣುತ್ತಿತ್ತು. ಅವರ ಅನುಪಸ್ಥಿತಿಯಲ್ಲಿಯೇ ಬಿಜೆಪಿ - ಜೆಡಿಎಸ್ ಸದಸ್ಯರು ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಸಾಂಘಿಕ ಹೋರಾಟ ನಡೆಸಬೇಕು. ಎನ್​ಡಿಎ ಕೂಟವಾಗಿ ಎರಡೂ ಪಕ್ಷಗಳನ್ನು ಸಮರ್ಥನೆ ಮಾಡಿಕೊಳ್ಳಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಯಿತು.

ಸಭೆ ನಂತರ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಅಧಿವೇಶನದಲ್ಲಿ ಮೊದಲ ಬಾರಿಗೆ ಎನ್​ಡಿಎ ಜಂಟಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟುವ ಕೆಲಸ ಮಾಡಬೇಕಿದೆ. ಎಲ್ಲ ವಿಚಾರಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಶಕ್ತಿ ಸಿಕ್ಕಿದೆ. ಮುಡಾ ಹಗರಣದಲ್ಲಿ ಸಿಎಂ ಭಾಗಿಯಾಗಿರುವುದರಿಂದ ಇದು ದೇಶದ ವಿಚಾರವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರವನ್ನು ಬಟಾಬಯಲು ಮಾಡುತ್ತೇವೆ. ಸಿಎಂ ಹತ್ತು ವರ್ಷ ನಾನು ಜಮೀನೇ ನೋಡಿಲ್ಲ ಅನ್ನೋದು ಸಂಶಯಾಸ್ಪದವಾಗಿದ್ದು, ಉಭಯ ಸದನಗಳಲ್ಲಿ ಪರಿಣಾಮಕಾರಿ ಹೋರಾಟ ನಡೆಸಲಿದ್ದೇವೆ ಎಂದರು.

ಜೆಡಿಎಸ್ ಬಿಜೆಪಿ ಜಂಟಿ ಹೋರಾಟ ಎಂದ ಹೆಚ್​ಡಿಕೆ: ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ವಿಧಾನ ಕಲಾಪದಲ್ಲಿ ಸರ್ಕಾರದ ವಿರುದ್ಧ ಜೆಡಿಎಸ್ ಬಿಜೆಪಿ-ಜಂಟಿ ಹೋರಾಟ ನಡೆಸಲಿವೆ ಎಂದು ತಿಳಿಸಿದರು. ಅಂಕಿ - ಅಂಶ, ಹಗರಣಗಳನ್ನು ಉಲ್ಲೇಖಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ಪ್ರಹಾರ ನಡೆಸಿದರು.

BJP-JDS coordination meeting
ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ (ETV Bharat)

ಸರ್ಕಾರ ಆರಂಭದಿಂದಲೂ ಹಗರಣಗಳಲ್ಲಿಯೇ ಮುಳುಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ವರ್ಗಾವಣೆ ದಂಧೆ, ಪರಿಶಿಷ್ಟ ಜಾತಿ ವರ್ಗದ ಹಣ ದುರ್ಬಳಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ನಮ್ಮ ಮೈತ್ರಿಕೂಟ ಸದನದಲ್ಲಿ ಹೋರಾಟ ನಡೆಸಲಿದೆ ಎಂದರು.

ಮುಡಾ ಪ್ರಕರಣ ವಿಚಾರದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯಿಂದಲೇ ಕಾನೂನುಬಾಹಿರ ಚಟುವಟಿಕೆ ನಡೆದಿದೆ. 62 ಕೋಟಿ ರೂ. ಪರಿಹಾರ ಯಾವ ಆಧಾರದಲ್ಲಿ ಅವರು ಕೇಳಿದರು? ಎಷ್ಟು ಜನ ಭೂಮಿ ಕಳೆದುಕೊಂಡವರಿಗೆ ಇವರು ಯಾವ ರೀತಿಯಲ್ಲಿ ಸರ್ಕಾರದಲ್ಲಿ ಪರಿಹಾರ ಕೊಟ್ಟಿದ್ದಾರೆ? ಅರ್ಕಾವತಿ ರೀಡೂ ಹಗರಣ ಮಾಡಿದರಲ್ಲ, ಅಲ್ಲಿ 300 ರಿಂದ 400 ಕೋಟಿ ರೂ. ಅವ್ಯವಹಾರ ನಡೆದಿತ್ತಲ್ಲ, ಆ ಲೆಕ್ಕಾಚಾರದಲ್ಲಿದಲ್ಲಿ 62 ಕೋಟಿ ರೂ. ಕೇಳಿರಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಆರೋಪ ಮಾಡಿದರು.

ಒಂದು ಕಡೆ ಮುಡಾ, ಮತ್ತೊಂದೆಡೆ ವಾಲ್ಮೀಕಿ ಹಗರಣ ಹಾಗೂ ದಲಿತ ಕುಟುಂಬದವರಿಗೆ ನೆರವು ಕೊಡುವಂತಹ ಹಣವನ್ನ ಲೂಟಿ ಮಾಡಿ ಸ್ವೇಚ್ಛಾಚಾರವಾಗಿ ಬಳಸಿಕೊಂಡಿದ್ದಾರೆ. ಇತರ ಎಲ್ಲ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬರಗಾಲ ಸಮಸ್ಯೆ, ಮಳೆಯ ಅವಾಂತರ, ಡೆಂಗ್ಯೂದಿಂದ ಸಾವನ್ನಪ್ಪಿದ ಜನರ ಬಗ್ಗೆ, ಕಾನೂನು ಸುವ್ಯವಸ್ಥೆ, ಹೆಚ್.ಕೆ.ಪಾಟೀಲ್ ಅವರು ಸರ್ಕಾರಕ್ಕೆ ಬರೆದ ಪತ್ರದ ಬಗ್ಗೆ, ಹಾಲಿನ ದರ ಏರಿಕೆ ಮಾಡಿ ರೈತರಿಗೆ ಹಣ ನೀಡದೆ ಇರುವುದು.. ಹೀಗೆ ಹತ್ತಾರು ವಿಷಯಗಳ ಬಗ್ಗೆ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸರ್ಕಾರದ ನಡವಳಿಕೆ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ತೀರ್ಮಾನಿಸಿದ್ದೇವೆ. ಬಡವರಿಗೆ ಗ್ಯಾರಂಟಿ ಎನ್ನುತ್ತಾರೆ, ಆ ಗ್ಯಾರಂಟಿಗಳನ್ನು ನೋಡಿಕೊಳ್ಳಲು ಒಬ್ಬ ಅಧ್ಯಕ್ಷ, ಅದರ ಮೂಲಕ ದುಂದುವೆಚ್ಚ.. ಇದು ಈ ಸರ್ಕಾರದ ಹಣೆಬರಹ. ಗ್ಯಾರಂಟಿಗಳಿಗೆ ಹಣ ಕೊಟ್ಟಿದ್ದರಿಂದ ರಾಜ್ಯದ ಅಭಿವೃದ್ಧಿಗೆ ಹಣ ಇಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದಾರಲ್ಲವೇ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ: ಮುಡಾ ಹಗರಣದ ವಿರುದ್ಧ ಪ್ರತಿಭಟನೆ: ಬೆಂಗಳೂರಿನಿಂದ ಗೂಡ್ಸ್‌ ಆಟೋದಲ್ಲಿ ಬಂದ ಆರ್ ಅಶೋಕ್‌ ಪೊಲೀಸರ ವಶಕ್ಕೆ - R Ashok taken into police custody

ETV Bharat Logo

Copyright © 2024 Ushodaya Enterprises Pvt. Ltd., All Rights Reserved.