ETV Bharat / state

ಬಿಜೆಪಿ, ಜೆಡಿಎಸ್ ಮುಖಂಡರಿಂದ ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ - HEMAVATHI LINK CANAL PROJECT

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್‌ ಯೋಜನೆ ವಿರೋಧಿಸಿ ಬಿಜೆಪಿ, ಜೆಡಿಎಸ್​ ನಾಯಕರು ಶನಿವಾರದಿಂದ ಪಾದಯಾತ್ರೆ ಆರಂಭಿಸಿದ್ದಾರೆ.

Police stop MLA Suresh Gowda
ಶಾಸಕ ಸುರೇಶ್ ಗೌಡರನ್ನು ತಡೆದ ಪೊಲೀಸರು (ETV Bharat)
author img

By ETV Bharat Karnataka Team

Published : Dec 8, 2024, 2:54 PM IST

Updated : Dec 8, 2024, 4:17 PM IST

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಶಾಸಕ ಸುರೇಶ್ ಗೌಡ ಅವರನ್ನು ತಡೆದರು.

ಜಿಲ್ಲೆಗೆ ಸರಬರಾಜಾಗುವ ಹೇಮಾವತಿ ನದಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗುವ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್‌ ಯೋಜನೆ ವಿರೋಧಿಸಿ ಶನಿವಾರದಿಂದ ಬಿಜೆಪಿ ಹಾಗೂ ಜೆಡಿಎಸ್​ ನಾಯಕರು ಪಾದಯಾತ್ರೆ ಆರಂಭಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿಯೆದುರು ಧರಣಿ ನಡೆಸಲು ನಿರ್ಧರಿಸಿದ್ದರು. ಗುಬ್ಬಿಯಿಂದ ತುಮಕೂರು ನಗರದ ಕಡೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ನಾಯಕರು, ಕಾಂಗ್ರೆಸ್​ ಸರ್ಕಾರದ ಧೋರಣೆ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ, ಜೆಡಿಎಸ್ ಮುಖಂಡರಿಂದ ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ (ETV Bharat)

ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ

Last Updated : Dec 8, 2024, 4:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.