ETV Bharat / state

ಆದಿಚುಂಚನಗಿರಿ ಮಠಕ್ಕೆ ಒಟ್ಟಾಗಿ ಆಗಮಿಸಿದ ಬಿಜೆಪಿ, ಜೆಡಿಎಸ್ ನಾಯಕರು - BJP JDS Leaders

ವಿಜಯನಗರ ಆದಿಚುಂಚನಗಿರಿ ಶಾಖಾ ಮಠಕ್ಕೆ ಬಿಜೆಪಿ, ಜೆಡಿಎಸ್ ನಾಯಕರು ಭೇಟಿ ಕೊಟ್ಟಿದ್ದಾರೆ.

author img

By ETV Bharat Karnataka Team

Published : Apr 10, 2024, 12:52 PM IST

BJP, JDS leaders visit Vijayanagara Adichunchanagiri Math
ಆದಿಚುಂಚನಗಿರಿ ಮಠಕ್ಕೆ ಒಟ್ಟಾಗಿ ಆಗಮಿಸಿದ ಬಿಜೆಪಿ, ಜೆಡಿಎಸ್ ನಾಯಕರು

ಬೆಂಗಳೂರು: ವಿಜಯನಗರ ಆದಿಚುಂಚನಗಿರಿ ಶಾಖಾ ಮಠಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. ಲೋಕಸಭೆ ಚುನಾವಣೆ ಹಿನ್ನೆಲೆ, ಸಮುದಾಯದ ಮತ ಕ್ರೋಢೀಕರಣದ ಲೆಕ್ಕಾಚಾರದೊಂದಿಗೆ ದೋಸ್ತಿ ಪಕ್ಷಗಳ ನಾಯಕರು ಆದಿಚುಂಚನಗಿರಿ ಮಠಕ್ಕೆ ಒಟ್ಟಾಗಿ ಬಂದು ಒಗ್ಗಟ್ಟು ಪ್ರದರ್ಶಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಮಠಕ್ಕೆ ಆಗಮಿಸಿ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದರು.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಶೋಭಾ ಕರಂದ್ಲಾಜೆ, ಯದುವೀರ್ ಒಡೆಯರ್, ವಿ. ಸೋಮಣ್ಣ, ಡಾ.ಕೆ. ಸುಧಾಕರ್, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಸಿ.ಎನ್. ಮಂಜುನಾಥ್, ಕೋಲಾರ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ಜಿ.ಟಿ. ದೇವೇಗೌಡ, ಅಶ್ವಥ್ ನಾರಾಯಣ್, ಸಿ.ಟಿ. ರವಿ ಸೇರಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮಠಕ್ಕೆ ಭೇಟಿ ನೀಡಿದರು.

ದೋಸ್ತಿಗಳ ಒಗ್ಗಟ್ಟು ಪ್ರದರ್ಶನ: ದೋಸ್ತಿ ನಾಯಕರು ಒಟ್ಟಾಗಿ ಮಠಕ್ಕೆ ಆಗಮಿಸುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆ, ಒಗ್ಗಟ್ಟು ಪ್ರದರ್ಶಿಸಿರುವುದು ಮಹತ್ವ ಪಡೆದುಕೊಂಡಿದೆ. ಈ ಭೇಟಿ ಹಳೇ ಮೈಸೂರು ಕ್ಷೇತ್ರಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಒಗ್ಗಟ್ಟಿನ ಸಂದೇಶ ರವಾನಿಸುವ ಪ್ರಯತ್ನವನ್ನು ಮೈತ್ರಿ ನಾಯಕರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರದ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಹಳೇ ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳಾದ ಯದುವೀರ್ ಒಡೆಯರ್, ತುಮಕೂರು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್, ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ಇವರೇ ನೋಡಿ ಟಾಪರ್ಸ್​​​; ಹೀಗಿದೆ ಡಿಟೇಲ್ಸ್​​​ - 2nd PUC toppers

ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಯುಗಾದಿ ಹಬ್ಬದ ನಿಮಿತ್ತ ನಾವಿಲ್ಲಿ ಬಂದಿದ್ದೇವೆ. ಜೆಡಿಎಸ್ ಬಿಜೆಪಿ ಅಭ್ಯರ್ಥಿಗಳು ಒಟ್ಟಾಗಿ ಬಂದಿದ್ದೇವೆ. ಸ್ವಾಮೀಜಿ ಅವರ ಆಶೀರ್ವಾದ ಪಡೆದಿದ್ದೇವೆ. ವಿಪಕ್ಷ ಗಳಿಗೆ ಅಸ್ಥಿರ ಕಾಡುತ್ತಿದೆ. ಎಲ್ಲ ಸಮುದಾಯದವರಿಗೆ ಸೇರಿದ ಮಠ ಇದಾಗಿದೆ. ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಎಂದರು.

ಇದನ್ನೂ ಓದಿ: ಒಂದೇ 1 ಎಕರೆ ಜಮೀನಿನಲ್ಲಿ 20 ಟನ್ ಅನಾನಸ್; ಬರಗಾಲದಲ್ಲೂ ಬಂಗಾರದ ಬೆಳೆ, ಹಾವೇರಿ ರೈತನ ಸಂಪಾದನೆ ಎಷ್ಟು ಗೊತ್ತಾ? - successful pineapple crop

ಬಿಡದಿ ತೋಟದ ಮನೆಯಲ್ಲಿ ಔತಣಕೂಟ: ಬಿಡದಿಯಲ್ಲಿ ದೋಸ್ತಿ ನಾಯಕರಿಗೆ ಔತಣಕೂಟ ಏರ್ಪಡಿಸಲಾಗಿದೆ. ಅಲ್ಲಿ ಸಭೆ ನಡೆಸಲಿದ್ದೇವೆ ಎಂದು ಇದೇ ವೇಳೆ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಈ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾಲ್ಗೊಂಡು ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.