ETV Bharat / state

ಬಾಣಂತಿಯರ ಸಾವು: ತಜ್ಞರ ತಂಡ ತನಿಖಾ ವರದಿ ಮುಚ್ಚಿಟ್ಟಿರುವ ಹಿಂದೆ ಅನುಮಾನ- ಅಶೋಕ್ - R ASHOK

ಬಾಣಂತಿಯರ ಸಾವಿನ ಬಗ್ಗೆ ತಜ್ಞರ ತಂಡ ಮಾಡಿರುವ ತನಿಖಾ ವರದಿಯನ್ನು ಮುಚ್ಚಿಡಲಾಗಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ.

R ASHOK SLAMS CONGRESS GOVT
ಪ್ರತಿಪಕ್ಷ ನಾಯಕ ಆರ್.ಅಶೋಕ್ (ETV Bharat)
author img

By ETV Bharat Karnataka Team

Published : Nov 29, 2024, 1:20 PM IST

ಬೆಂಗಳೂರು: "ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಬಾಣಂತಿ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನು ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ" ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು 'ಎಕ್ಸ್'​ನಲ್ಲಿ ಪೋಸ್ಟ್​ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ರಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷಧಿಯನ್ನು ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ. ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನು ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ" ಎಂದು ಪ್ರಶ್ನಿಸಿದ್ದಾರೆ.

"ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ. ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯರನ್ನು ಒತ್ತಾಯಿಸುತ್ತೇನೆ" ಎಂದು ಆರ್.ಅಶೋಕ್ 'ಎಕ್ಸ್'​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣ: ತನಿಖೆ ನಡೆಸಿ ವರದಿ ನೀಡಲು ಡಿಸಿಗೆ ಸಚಿವ ಜಮೀರ್ ಸೂಚನೆ

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿಯ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಮಾಹಿತಿ ಪಡೆದ ಸಚಿವರು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.