ETV Bharat / state

ಮುನಿರತ್ನ ಪ್ರಕರಣದ ಬಗ್ಗೆ ಸಮುದಾಯದ ನಾಯಕರು, ಸ್ವಾಮೀಜಿಗಳು ಮಾತಾಡಬೇಕು: ಡಿಸಿಎಂ ಡಿಕೆಶಿ - Muniratna Case - MUNIRATNA CASE

ಶಾಸಕ ಮುನಿರತ್ನ ಅವರು ಸಮುದಾಯಗಳ ಬಗ್ಗೆ ಮಾತನಾಡಿರುವ ಕುರಿತು ಬಿಜೆಪಿ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಡಿಸಿಎಂ
ಡಿಸಿಎಂ (ETV Bharat)
author img

By ETV Bharat Karnataka Team

Published : Sep 17, 2024, 2:03 PM IST

ಡಿಸಿಎಂ ಡಿಕೆಶಿ (ETV Bharat)

ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರಿಕರು ಮಾತನಾಡಬೇಕು. ಜೊತೆಗೆ ಈ ಕುರಿತು ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಅಮೆರಿಕ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಮಾತನಾಡಿದರು. ದೊಡ್ಡ ದೊಡ್ಡ ನಾಯಕರಿದ್ದಾರೆ, ಅವರು ಮಾತಾಡಬೇಕು. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು. ಸರಿಯಿದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು ಎಂದು ಶಾಸಕ ಮುನಿರತ್ನ ಅವರು ದಲಿತರು ಮತ್ತು ಒಕ್ಕಲಿಗ ಸಮುದಾಯದ ಬಗ್ಗೆ ಮಾಡಿರುವ ಅವಹೇಳನ ಕುರಿತ ಪ್ರಶ್ನೆಗೆ ಡಿಕೆಶಿ ಉತ್ತರಿಸಿದರು.

ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ-ತಮ್ಮರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೆ ಈ ವಿಚಾರ ಗೊತ್ತೇ ಇಲ್ಲ, ತಿಳಿದು ಮಾತಾಡ್ತೀನಿ. ನನಗೆ ಇನ್ನೂ ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹುದ್ದೆ ಹೊಂದಿರುವ ಆರ್ ಅಶೋಕ್, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ದೊಡ್ಡ ನಾಯಕರಿದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು ಎಂದರು.

ರಾಹುಲ್ ಗಾಂಧಿ ಭೇಟಿಗೆ ಯಾರ ಅನುಮತಿ ಬೇಕು?: ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರ ಭೇಟಿ ಹಾಗೂ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ನಿಮಗೆ ಹೇಳಲಾಗುತ್ತದೆಯೇ? ನನ್ನ ತಮ್ಮ, ಹೆಂಡತಿ ಮತ್ತು ಸ್ವಾಮೀಜಿಯವರ ಬಳಿ ಏನು ಮಾತನಾಡುತ್ತೇನೆ ಎಂಬುದನ್ನು ನಿಮ್ಮ ಬಳಿ ಹೇಳಲು ಆಗುತ್ತದೆಯೇ? ಎಂದು ಡಿಕೆಶಿ ಪ್ರಶ್ನಿಸಿದರು.

ನಾಗಮಂಗಲದಲ್ಲಿ ಗಣೇಶ ನಿಮಜ್ಜನ ವೇಳೆ ನಡೆದ ಗಲಾಟೆ ಪ್ರಕರಣದ ಬಗ್ಗೆ ಮಾತನಾಡಿ, ಸರ್ಕಾರ, ಪೊಲೀಸ್ ಇಲಾಖೆ ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೊ ಅದನ್ನು ಮಾಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಯಡಿಯೂರಪ್ಪನವರ ಮಗ ಎಂಬ ಅಹಂಕಾರವಿಲ್ಲ, ಹೆಮ್ಮೆ ಇದೆ: ಬಿ.ವೈ. ವಿಜಯೇಂದ್ರ - BJP State President

ETV Bharat Logo

Copyright © 2024 Ushodaya Enterprises Pvt. Ltd., All Rights Reserved.