ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿಎಂ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಯತ್ನ, ಹಲವರು ವಶಕ್ಕೆ - BJP Protest - BJP PROTEST

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು (ETV Bharat)
author img

By ETV Bharat Karnataka Team

Published : Jul 3, 2024, 11:15 AM IST

Updated : Jul 3, 2024, 2:04 PM IST

ಬಿಜೆಪಿ ನಾಯಕರ ಪ್ರತಿಭಟನೆ (ETV Bharat)

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಖಂಡರು ಇಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದರು.

ನಗರದ ಕುಮಾರಕೃಪಾ ಅತಿಥಿಗೃಹದಿಂದ ಕಾವೇರಿಗೆ ಕಾಲ್ನಡಿಗೆ ಜಾಥಾ ಮೂಲಕ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಅತಿಥಿಗೃಹದ ಮುಂಭಾಗದ ರಸ್ತೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ, ನೂಕಾಟ ನಡೆಯಿತು. ವಿಜಯೇಂದ್ರ, ಅಶೋಕ್, ಸುನೀಲ್ ಕುಮಾರ್ ಸೇರಿದಂತೆ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, "ಉತ್ತಮ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ವಿಶೇಷ ತನಿಖಾ ದಳವು ಇಲ್ಲಿಯವರೆಗೂ ನಾಗೇಂದ್ರ ಅವರನ್ನು ವಿಚಾರಣೆಗೆ ಕರೆದಿಲ್ಲ. ನೂರಾರು ಕೋಟಿ ರೂಪಾಯಿಗಳನ್ನು ನಮ್ಮ ರಾಜ್ಯದಿಂದ ಹೊರರಾಜ್ಯಕ್ಕೆ ವರ್ಗಾಯಿಸಿ ಲೋಕಸಭಾ ಚುನಾವಣೆಯಲ್ಲಿ ಬೇರೆ ಬೇರೆ ರಾಜ್ಯಗಳಿಗೆ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇಲ್ಲಿಯವರೆಗೂ ಮಾಜಿ ಸಚಿವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ?, ಇವರ ಭಂಡತನ ಜಗಜ್ಜಾಹೀರಾಗಿದೆ. ಮುಖವಾಡ ಕಳಚಿ ಬಿದ್ದಿದೆ" ಎಂದು ಆರೋಪಿಸಿದರು.

"ಮತ್ತೊಂದೆಡೆ, ಮೈಸೂರಿನ ಮುಡಾ ಹಗರಣ ಬೆಳಕಿಗೆ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ್ದು ನೂರಾರು ಕೋಟಿ ಹಗರಣ ನಡೆದಿದ್ದರೆ, ಮುಡಾದಲ್ಲಿ ಮೂರರಿಂದ ನಾಲ್ಕು ಸಾವಿರ ಕೋಟಿ ಹಗರಣ ನಡೆದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಜಿಲ್ಲಾಧಿಕಾರಿಗಳು ವರದಿ ಕೊಟ್ಟಿದ್ದಾರೆ. ಅವ್ಯವಹಾರ ನಡೆದಿದೆ ಎಂದು ವರದಿ ಕೊಟ್ಟು ಏಳು ತಿಂಗಳಾದರೂ ಆ ವರದಿಯನ್ನು ಜೇಬ್​ನಲ್ಲಿ ಇಟ್ಟುಕೊಂಡು ಯಾರ ಗಮನಕ್ಕೂ ತಾರದೆ ಇಂದು ಭ್ರಷ್ಟರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ".

"ಬೈರತಿ ಸುರೇಶ್ ಮೊನ್ನೆ ಮೈಸೂರಿಗೆ ಹೋಗಿ ಸಭೆ ನಡೆಸಿ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಯಾಕೆ ವರ್ಗಾವಣೆ ಮಾಡಿದ್ದಾರೆ? ಭ್ರಷ್ಟಾಚಾರ ನಡೆದಿರುವುದು ತಪ್ಪು. ನೀವೇ ಸಚಿವರಿದ್ದೀರಿ. ನಗರಾಭಿವೃದ್ಧಿ ಸಚಿವರ ಗಮನಕ್ಕೆ ಬಾರದೆ ಹಗರಣ ನಡೆಯಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳ ಪತ್ನಿಗೆ 15 ನಿವೇಶನಗಳನ್ನು ಕೊಟ್ಟಿದ್ದಾರೆ. ಮತ್ತೊಂದೆಡೆ ಸಚಿವರು ಮೈಸೂರಿಗೆ ಹೋಗಿ ಅಧಿಕಾರಿಗಳ ವರ್ಗಾವಣೆ ಮಾಡಿ, ಹಗರಣಕ್ಕೆ ಸಂಬಂಧಪಟ್ಟ ಕಡತಗಳನ್ನು ಸ್ವತಃ ತಾವೇ ಬೆಂಗಳೂರಿಗೆ ತೆಗೆದುಕೊಂಡು ಬಂದಿದ್ದಾರೆ. ಈ ಮೂಲಕ ಹಗರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ" ಎಂದು ದೂರಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷ ಒಂದು ತಿಂಗಳಾಗಿದೆ. ಒಂದಾದ ನಂತರ ಒಂದು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಲೂಟಿ ಹೊಡೆಯಲು ಸುರಂಗ ಕೊರೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ನಾವು ರಾಜ್ಯಪಾಲರ ಕದ ತಟ್ಟಿದ ನಂತರವೇ ಮೊದಲ ವಿಕೆಟ್ ಬಿದ್ದಿದೆ. ಈಗ ನಾಲ್ಕನೇ ಹಂತದ ಹೋರಾಟ ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಯತ್ನ ನಡೆಸಲಾಗಿದೆ" ಎಂದರು.

"ಮೈಸೂರು ಮುಡಾದಲ್ಲಿ 50ರ ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿದ್ದಾರೆ. ಮೂರರಿಂದ ನಾಲ್ಕು ಸಾವಿರ ಕೋಟಿ ಹಗರಣ ನಡೆದಿದೆ. ಕಳೆದ 20 ವರ್ಷಗಳಿಂದ ಹಗರಣನ ನಡೆದಿದೆ ಎನ್ನಲಾಗುತ್ತಿದೆ. ಇದನ್ನು ಯಾರೇ ಮಾಡಿರಲಿ, ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಬದಲಿ ನಿವೇಶನದ ಗೋಲ್ಮಾಲ್ ನಡೆದಿದೆ. ಬಡವರು 86,000 ಅರ್ಜಿಗಳನ್ನು ಹಾಕಿದ್ದಾರೆ. ಅವರಿಗೆ ನಿವೇಶನ ಇಲ್ಲ. ಆದರೆ ಮುಖ್ಯಮಂತ್ರಿಗಳಿಗೆ ಕಟಾಕಟ್ ಎಂದು ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮಂಜೂರಾಗಿರುವ ನಿವೇಶನಗಳ ಸಂಖ್ಯೆಗಿಂತಲೂ ಹೆಚ್ಚಿನ ನಿವೇಶನಗಳನ್ನು ಕೊಡಲಾಗಿದೆ. ಹಾಗಾಗಿ ಸಮಗ್ರ ತನಿಖೆಯಾಗಲೇಬೇಕು" ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾಳೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ; ಸಿಎಂಗೆ ಸಪ್ತ ಪ್ರಶ್ನೆಗಳ ಸವಾಲೆಸೆದ ಪ್ರತಿಪಕ್ಷ ನಾಯಕ ಆರ್ ಅಶೋಕ್ - LOP R ASHOK ON MUDA SCAM

Last Updated : Jul 3, 2024, 2:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.