ETV Bharat / state

ಹಗರಣಗಳ ವಿರುದ್ಧ ಉಭಯ ಸದನಗಳಲ್ಲಿ ಹೋರಾಟ: ಬಿಜೆಪಿ ನಿರ್ಧಾರ - BJP Leaders Meeting

author img

By ETV Bharat Karnataka Team

Published : Jul 10, 2024, 2:22 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿರಿಯ ಮುಖಂಡರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಇಂದು ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿ, ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಬೇಕಿರುವ ವಿಷಯಗಳ ಕುರಿತು ಚರ್ಚಿಸಿದರು.

BJP leaders meeting
ಬಿಜೆಪಿ ಪ್ರಮುಖರ ಸಭೆ (ETV Bharat)

ಬೆಂಗಳೂರು: ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತ ಪಕ್ಷದ ವಿರುದ್ಧ ಸದನದ ಒಳಗೆ ಹೋರಾಟ ನಡೆಸುವ ಕುರಿತು ಮಹತ್ವದ ನಿರ್ಧಾರವನ್ನು ಬಿಜೆಪಿ ನಾಯಕರು ಕೈಗೊಂಡಿದ್ದಾರೆ. ಹಗರಣಗಳ ಪ್ರಸ್ತಾಪದ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು. ಉಭಯ ಸದನಗಳಲ್ಲಿಯೂ ಹಗರಣಗಳು, ಅಕ್ರಮದ ವಿರುದ್ಧ ಗಟ್ಟಿಯಾದ ನಿಲುವಿನೊಂದಿಗೆ ಹೋರಾಟ ನಡೆಸುವ ನಿರ್ಧಾರ ಮಾಡಿದ್ದಾರೆ.

ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಅನುಸರಿಸಬೇಕಿರುವ ಕಾರ್ಯತಂತ್ರ, ಪ್ರಮುಖವಾಗಿ ಪ್ರಸ್ತಾಪಿಸಬೇಕಿರುವ ವಿಷಯಗಳು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಇಂದು ನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿರಿಯ ಮುಖಂಡರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಸುನಿಲ್ ಕುಮಾರ್, ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ, ಅರವಿಂದ ಬೆಲ್ಲದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಗರಣಗಳ ಹುತ್ತ ಕಟ್ಟಿಕೊಂಡಿದ್ದು, ಇದರ ವಿರುದ್ಧ ಸಮರ್ಥವಾಗಿ ಸದನದಲ್ಲಿ ಹೋರಾಟ ನಡೆಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಲ್ಲ ನಾಯಕರ ಅಭಿಪ್ರಾಯ ಆಲಿಸಿ ಉಭಯ ಸದನಗಳಲ್ಲಿಯೂ ಸಮಾನ ರೀತಿಯ ಹೋರಾಟ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ನಿರ್ಧಾರ ಮಾಡಲಾಯಿತು.

ಮೊದಲ ದಿನದಿಂದಲೇ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣದೊಂದಿಗೆ ಆರಂಭಿಸಿ, ಮೈಸೂರಿನ ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ನಿವೇಶನಗಳ ಹಂಚಿಕೆ ಆರೋಪ ಸೇರಿದಂತೆ ಇಡೀ ಪ್ರಕರಣದ ಸಿಬಿಐ ತನಿಖೆ ಕೋರಿ ಉಭಯ ಸದನಗಳಲ್ಲಿ ಹೋರಾಟ ನಡೆಸಬೇಕು, ಗ್ಯಾರಂಟಿ ಯೋಜನೆಗಳಿಗೆ ಎಸ್​ಇಪಿ ಟಿಎಸ್​ಪಿ ಹಣ ಬಳಕೆ ವಿರುದ್ಧ ಹೋರಾಟ ನಡೆಸಬೇಕು. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿರುದ್ಧ ಹೋರಾಟ ನಡೆಸಬೇಕು ಹಾಗು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎನ್ನುವುದರ ವಿರುದ್ಧವೂ ಗಟ್ಟಿಯಾದ ದನಿಯಲ್ಲಿ ಉಭಯ ಸದನಗಳಲ್ಲಿ ಹೋರಾಟ ನಡೆಸಬೇಕು ಎನ್ನುವ ನಿರ್ಧಾರವನ್ನು ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸಂಸತ್ ಅಧಿವೇಶನ: ರಾಜ್ಯಸಭೆಯಲ್ಲಿಂದು ಪ್ರಧಾನಿ ಮೋದಿ ಮಾತು - Rajya Sabha Session

ETV Bharat Logo

Copyright © 2024 Ushodaya Enterprises Pvt. Ltd., All Rights Reserved.