ETV Bharat / state

ಎದುರಾಳಿ ಯಾರೇ ಬರಲಿ ಬಿಜೆಪಿ ಗೆಲುವಿನ ಅಂತರ ಕಡಿಮೆಯಾಗುವುದಿಲ್ಲ: ಅಣ್ಣಾಸಾಹೇಬ್ ಜೊಲ್ಲೆ

author img

By ETV Bharat Karnataka Team

Published : Mar 16, 2024, 5:12 PM IST

ಚಿಕ್ಕೋಡಿ ಪಟ್ಟಣದಲ್ಲಿ 40 ಲಕ್ಷ ರೂ ವೆಚ್ಚದ ಹೈಟೆಕ್ ಗ್ರಂಥಾಲಯ ಕಟ್ಟಡ ಕಾಮಗಾರಿಗೆ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಭೂಮಿ ಪೂಜೆ ನೆರವೇರಿಸಿದರು.

BJP candidate Annasaheb Jolle spoke to the media.
ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಮಾಧ್ಯಮದವರ ಜೊತೆ ಮಾತನಾಡಿದರು.

ಚಿಕ್ಕೋಡಿ: ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಗಳು ಬಂದರೂ ಬಿಜೆಪಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಲೋಕಸಭೆ ಚುನಾವಣೆ ವಿಚಾರದಲ್ಲಿ ಚಿಕ್ಕೋಡಿಯಲ್ಲಿ ಬಿಜೆಪಿ v/s ಕಾಂಗ್ರೆಸ್ ಚುನಾವಣೆ ಆಗಲಿದೆ. ಇಲ್ಲಿ ಅಭ್ಯರ್ಥಿಗಳು ಮುಖ್ಯವಲ್ಲ ಎಂದು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಶನಿವಾರ ಚಿಕ್ಕೋಡಿ ಪಟ್ಟಣದಲ್ಲಿ 40 ಲಕ್ಷ ರೂಪಾಯಿ ವೆಚ್ಚದ ಹೈಟೆಕ್ ಗ್ರಂಥಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ, ಇಲ್ಲಿ ಯಾರೇ ಅಭ್ಯರ್ಥಿಗಳು ಬಂದರೂ ಯಾವುದೇ ಪರಿಣಾಮ ಬೀರುವುದಿಲ್ಲ. ಚಿಕ್ಕೋಡಿ ಲೋಕಸಭೆ ಎಂದರೆ ಅದು ಪಕ್ಷ ಪಕ್ಷಗಳ ನಡುವೆ ನಡೆಯುವಂತ ಚುನಾವಣೆ. ಇಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ನಮ್ಮ ಬಿಜೆಪಿ ವರಿಷ್ಠರು ನನ್ನನ್ನು ಅಭ್ಯರ್ಥಿಯಾಗಿ ಮಾಡಿದ್ದಾರೆ. ಎದುರಾಳಿ ಯಾರೇ ಬರಲಿ ನಮ್ಮ ಕೆಲಸ ನಾವು ಮಾಡುತ್ತೇವೆ. ಎದುರಾಳಿ ಎಷ್ಟೇ ಬಲಿಷ್ಠ ಇದ್ದರೂ ಬಿಜೆಪಿಯ ವರ್ಚಸ್ಸು ಕಡಿಮೆಯಾಗುವುದಿಲ್ಲ. ಕಳೆದ ಬಾರಿ ಒಂದು ಲಕ್ಷ ಹದಿನೆಂಟು ಸಾವಿರ ಮತಗಳ ಅಂತರದಿಂದ ನಾನು ಗೆಲುವು ಸಾಧಿಸಿದ್ದು, ಈ ಬಾರಿ ಅದಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ. ಜೊತೆಗೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ರಾಜ್ಯದಲ್ಲಿ ನಮ್ಮ ಮೊದಲಿನ ಬಿಜೆಪಿ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡಿದೆ. ಇದರಿಂದ ಬಿಜೆಪಿ ಪಕ್ಷದ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ನಾಯಕ ರಮೇಶ್ ಕತ್ತಿ ಅವರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು ರಮೇಶ ಕತ್ತಿ ಅವರನ್ನು ಸಂಪರ್ಕ ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಇಲ್ಲ. ಪಕ್ಷದಲ್ಲಿ ಟಿಕೆಟ್ ಕೇಳುವುದು ಸಾಮಾನ್ಯ, ಕಾಂಗ್ರೆಸ್ ನಾಯಕರ ಸಂಪರ್ಕ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ, ಅವರು ಕೂಡ ಟಿಕೆಟ್ ಕೇಳಿದರು, ಕೆಲ ದಿನಗಳ ವರೆಗೆ ವೈಮನಸ್ಸು ಇರೋದು ಸಹಜ ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯ ಕಟ್ಟಡಕ್ಕೆ ಭೂಮಿ ಪೂಜೆ: ಲೋಕಸಭೆ ಚುನಾವಣೆಗೆ ಮುನ್ನ ಕೊನೆಯ ಕಾಮಗಾರಿಗೆ ಸಂಸದ ಅಣ್ಣಾಸಾಹೇಬ್ ಸಾಹೇಬ್ ಜೊಲ್ಲೆ ಚಾಲನೆ ನೀಡಿದರು. ಚಿಕ್ಕೋಡಿ ಪಟ್ಟಣದಲ್ಲಿ ಪುರಸಭೆ ಆವರಣದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡಕ್ಕೆ ಭೂಮಿ ನೆರವೇರಿಸಿದರು. ಕಳೆದ ಒಂದು ವರ್ಷಗಳ ಹಿಂದೆ ಈ ಕಾಮಗಾರಿ ಅಪ್ರೂವಲ್ ಆಗಿದ್ದರೂ ಕಾರಣಾಂತರಗಳಿಂದ ವಿಳಂಬವಾಗಿತ್ತು. ಇಂದು ಸಂಜೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಸಂಸದರು ತುರ್ತಾಗಿ ಕಾಮಗಾರಿಗೆ ಭೂಮಿ ನೆರವೇರಿಸಿದರು.

ಇದನ್ನೂಓದಿ:ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್; ಕರ್ನಾಟಕದಲ್ಲಿ 2 ಹಂತದ ಮತದಾನ, ಜೂನ್​​ 4ಕ್ಕೆ ಮತ ಎಣಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.