ETV Bharat / state

ಆತುರದ ಹೇಳಿಕೆಗೆ ಬೆಲ್ಲದ್​ ಕ್ಷಮೆಯಾಚನೆ: ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ ಎಂದ ಸಿಎಂ - ARVIND BELLAD APOLOGY LETTER - ARVIND BELLAD APOLOGY LETTER

ಜಿಂದಾಲ್​ ಕಂಪನಿಗೆ ತರಾತುರಿಯಲ್ಲಿ ಭೂಮಿ ನೀಡಿದ್ದನ್ನು ಖಂಡಿಸಿ ಮಾತನಾಡುವ ವೇಳೆ ಸಿಎಂ ವಿರುದ್ಧ ನೀಡಿದ್ದ ಹೇಳಿಕೆಗೆ ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್​ ಕ್ಷಮೆಯಾಚಿಸಿದ್ದಾರೆ. ಬೆಲ್ಲದ್​ ಅವರ ಈ ನಡೆಯನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದು, ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ ಎಂದಿದ್ದಾರೆ.

MLA ARVIND BELLAD APOLOGY LETTER
ಸಿದ್ದರಾಮಯ್ಯ ಕ್ಷಮೆಯಾಚಿಸಿದ ಬೆಲ್ಲದ್ (ETV Bharat)
author img

By ETV Bharat Karnataka Team

Published : Sep 3, 2024, 1:07 PM IST

Updated : Sep 3, 2024, 5:43 PM IST

ಬೆಂಗಳೂರು: ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದೂ ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದಿದ್ದಾರೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಬೆಲ್ಲದ್​ ಕ್ಷಮಾಪಣೆ ಪತ್ರ: ಜಿಂದಾಲ್ ಕಂಪನಿಗೆ ಭೂಮಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಳಸಿದ ಪದಕ್ಕಾಗಿ ಪ್ರತಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಕ್ಷಮಾಪಣಾ ಪತ್ರದ ಮೂಲಕ ಕ್ಷಮೆಯಾಚಿಸಿದ್ದರು.

MLA ARVIND BELLAD APOLOGY LETTER
ಶಾಸಕ ಅರವಿಂದ ಬೆಲ್ಲದ ಕ್ಷಮಾಪಣಾ ಪತ್ರ (BELLAD APOLOGY LETTER)

ಜಿಂದಾಲ್ ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ಇತ್ತೀಚಿಗೆ ನಗರದ ಅರಮನೆ ಮೈದಾನದಲ್ಲಿ ನಡೆದಿದ್ದ ಮಾಧ್ಯಮಗೋಷ್ಟಿ ವೇಳೆ "ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ" ಎಂದಿದ್ದೆ, ಮಾತಿನ ಭರದಲ್ಲಿ ಈ ರೀತಿಯ ಪದ ಬಳಸಿದ್ದೆ. ಅಲ್ಲಿ ಬಳಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಕ್ಷಮಾಪಣೆ ಪತ್ರದಲ್ಲಿ ಉಲ್ಲೇಖ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: "ಜಿಂದಾಲ್​ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ, ರಾಜ್ಯ ...

Last Updated : Sep 3, 2024, 5:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.