ETV Bharat / state

ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು - Munirathna Gets Bail - MUNIRATHNA GETS BAIL

ಜಾತಿ ನಿಂದನೆ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು‌ ಲಭಿಸಿದೆ.

munirathna
ಮುನಿರತ್ನ (ETV Bharat)
author img

By ETV Bharat Karnataka Team

Published : Sep 19, 2024, 6:18 PM IST

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಆರ್.ಆರ್. ನಗರ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು‌ ದೊರೆತಿದೆ. ಜೀವ ಬೆದರಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಮುನಿರತ್ನಗೆ, ಎರಡನೇ‌ ಪ್ರಕರಣವಾದ ಜಾತಿ ನಿಂದನೆ ಕೇಸ್​​ನಲ್ಲಿ ಜಾಮೀನು ಸಿಕ್ಕಿದೆ.

ಪ್ರಕರಣದ ಸಂಬಂಧ ಜಾಮೀನು ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಈ ಆದೇಶ ಪ್ರಕಟಿಸಿದರು.

ನ್ಯಾಯಾಲಯದ ಷರತ್ತುಗಳೇನು?: ಶಾಸಕ ಮುನಿರತ್ನಗೆ 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂದು ಷರತ್ತು ವಿಧಿಸಿ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಷರತ್ತುಗಳನ್ನು ಪೂರೈಸಲು ಇಂದು ನ್ಯಾಯಾಲಯದ ಕಲಾಪ ಅಂತ್ಯವಾದ ಕಾರಣ ನಾಳೆ ಕೋರ್ಟ್​​ಗೆ ಸಲ್ಲಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಬಹುತೇಕ ನಾಳೆ ಜೈಲಿನಿಂದ ಬಿಡುಗಡೆಯಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕ ಯತ್ನಾಳ್​ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - DEFAMATION CATION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.