ETV Bharat / state

ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಬಂಧನ - MLA Muniratna Detained - MLA MUNIRATNA DETAINED

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಬಂಧನ
ಬಿಜೆಪಿ ಶಾಸಕ ಮುನಿರತ್ನ (ETV Bharat)
author img

By ETV Bharat Karnataka Team

Published : Sep 20, 2024, 11:45 AM IST

Updated : Sep 20, 2024, 3:13 PM IST

ರಾಮನಗರ: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬೆನ್ನಲ್ಲೇ ಆರ್.​ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಪೊಲೀಸರು ಬಂಧನ ಮಾಡಿದ್ದಾರೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಇಂದು ಬೆಳಗ್ಗೆ ಜೈಲಿನ ಬಳಿಯೇ ಅವರನ್ನು ಬಂಧಿಸಿದ್ದಾರೆ.

2020ರಿಂದ 2022ರವರೆಗೆ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಈಗಾಗಲೇ ಸಂತ್ರಸ್ತೆಯನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ ಬಂಧನ - BJP MLA Muniratna

Last Updated : Sep 20, 2024, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.