ಬೆಂಗಳೂರು: ಮಾಜಿ ಸಚಿವ ಹಾಗು ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು ಪಾದಯಾತ್ರೆ ಬಳಿಕ ತಿರುಪತಿ ಪ್ರವಾಸ ಮಾಡಿದ್ದ ಸುರೇಶ್ ಕುಮಾರ್‌ಗೆ ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಅಪರೂಪದ ಮ್ಯೂಟೆಂಟ್ ಚಿಕೂನ್‌ಗುನ್ಯಾ ತಗುಲಿರಬಹುದು ಎಂದು ಹೇಳಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರು ಇನ್ನೂ 7 ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಈ ಕುರಿತು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ನಿರೀಕ್ಷಿಸಲಾಗಿದೆ.