ETV Bharat / state

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ: ಬಸವರಾಜ ಬೊಮ್ಮಾಯಿ - MP BASAVARAJA BOMMAI

ಕಾಂಗ್ರೆಸ್ ಪಕ್ಷ​ ಸಮಾವೇಶಕ್ಕೆ ಖರ್ಚು ಮಾಡಿದ ಹಣವನ್ನು ಜನರ ಅಭಿವೃದ್ಧಿಗೆ ಬಳಸಿಕೊಳ್ಳಬಹುದಿತ್ತು. ದುಂದು ವೆಚ್ಚ ಮಾಡಿ ತಮ್ಮ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದರು.

MP Basavaraja Bommai
ಸಂಸದ ಬಸವರಾಜ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : Dec 6, 2024, 3:29 PM IST

ಹುಬ್ಬಳ್ಳಿ: "ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಫೆವಿಕಾಲ್​ ಹಾಕಿಕೊಂಡು ಕುಳಿತಿದ್ದಾರೆ. ಇತ್ತ ಡಿಸಿಎಂ ಡಿಕೆಶಿ ಫೆವಿಕಾಲ್ ಕಿತ್ತು ತೆಗೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ‌ಮಾತನಾಡಿದ ಅವರು, "ಎಲ್ಲವನ್ನೂ ಇವರಿಬ್ಬರೇ ಮಾಡಿದರೆ, ನಮ್ಮದೇನು ಪಾತ್ರ ಎನ್ನುವ ಆತಂಕ ಗೃಹ ಸಚಿವರಿಗಿದೆ.‌ ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ. ಯಾವ ಪುರುಷಾರ್ಥಕ್ಕೆ ಹಾಸನದಲ್ಲಿ ಸಮಾವೇಶ ಮಾಡಿದರು?.‌ ಜನಕಲ್ಯಾಣ ಮಾಡಲಿ ಅಂತ ಜನ ಅಧಿಕಾರ ಕೊಟ್ಟರೆ, ಕಾಂಗ್ರೆಸ್ ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ಇವರು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಜೀರೋ ಸರ್ಕಾರ. ಅಭಿವೃದ್ಧಿಯಲ್ಲಿ, ಸಾಮಾಜಿಕ ನ್ಯಾಯಾಲಯದಲ್ಲಿ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ, ಎಲ್ಲದರಲ್ಲೂ ಜೀರೋ. ಹಣಕಾಸಿನ ದಿವಾಳಿ ಮಾಡಿ, ಅಭಿವೃದ್ಧಿ ಶೂನ್ಯವಾಗಿದೆ" ಎಂದರು.

ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ (ETV Bharat)

"ಕಾಂಗ್ರೆಸ್​ ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಮಾಡುತ್ತಿದೆ.‌ ಕೋರ್ಟ್​ನಲ್ಲಿ ನಡೆಯುತ್ತಿರುವ ಕೇಸ್ ಮೇಲೆ ಪ್ರಭಾವ ಬೀರಲು ಸರ್ಕಾರಿ ದುಡ್ಡಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಅದೇ ದುಡ್ಡನ್ನು ಅಭಿವೃದ್ಧಿಗೆ ಬಳಕೆ ಮಾಡಬಹುದಿತ್ತು. ನಿಮಗೆ ಆನೆ ಬಲ ತುಂಬಿಕೊಳ್ಳುವುದಲ್ಲ. ಜನರಿಗೆ ಆನೆ ಬಲ ತುಂಬುವ ಕೆಲಸ ಆಗಬೇಕಿದೆ. ಅಸ್ಥಿರತೆಯಲ್ಲಿ ಸಿದ್ದರಾಮಯ್ಯ ಕಾಲ ದೂಡುತ್ತಿದ್ದಾರೆ" ಎಂದು ದೂರಿದರು.

ವಕ್ಫ್ ವಿರುದ್ಧ ಬಿಜೆಪಿ ಹೋರಾಟ ನಾಟಕ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಅವರು, "ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ. ವಿರೋಧ ಪಕ್ಷವಾಗಿ ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವುದು ನಮ್ಮ ಕೆಲಸ. ಸಿಎಂಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ" ಎಂದರು.

ಕೇಂದ್ರದಿಂದ 10 ಕೆ.ಜಿ ಅಕ್ಕಿ ಕೊಟ್ಟಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, "10 ಕೆಜಿ ಕೊಡುತ್ತಿದ್ದೇವೆ ಅಂತ ನಾವೆಲ್ಲೂ ಹೇಳಿಲ್ಲ. ಕಾಂಗ್ರೆಸ್​ನವರೇ 10 ಕೆ.ಜಿ ಕೊಡುವುದಾಗಿ ಹೇಳಿದ್ದರು. ಆದರೆ ಒಂದಗಳು ಅಕ್ಕಿಯನ್ನೂ ರಾಜ್ಯ ಸರ್ಕಾರ ಕೊಡುತ್ತಿಲ್ಲ. ಕೇಂದ್ರ ಅಕ್ಕಿ ಕೊಡುತ್ತಿದೆ ಅಂತ ಹೇಳಲು ಇವರಿಗೆ ನಾಚಿಕೆ" ಎಂದು ಹೇಳಿದರು.

"ಬಿಜೆಪಿ ಬಣ ರಾಜಕಾರಣ ಇತ್ಯಾದಿಗಳು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಲಿವೆ. ಈಗಾಗಲೇ ಸದಸ್ಯತ್ವ ಅಭಿಯಾನ ಮುಗಿಸಿದ್ದೇವೆ. ಸದಸ್ಯತ್ವ ಅಭಿಯಾನದ ನಂತರ ಹಲವಾರು ರಾಜಕೀಯವಾಗಿ ನಡೆದಿವೆ. ಸಂಘಟನಾತ್ಮಕ ಬೆಳವಣಿಗೆ, ರಾಜಕೀಯ ಸ್ಥಿತಿಗತಿಗಳ ಕುರಿತು ಕೋರ್ ಕಮಿಟಿ ಚರ್ಚೆಯಾಗಿದೆ. ಬೆಳಗಾವಿ ಅಧಿವೇಶನ ಸಹ ನಡೆಯುತ್ತೆ.‌ ಅಧಿವೇಶನದಲ್ಲಿ ಯಾವ ಹಗರಣಗಳನ್ನು ಕೈಗೆತ್ತಿಕೊಳ್ಳಬೇಕೆಂಬ ಕುರಿತು ಚರ್ಚೆಯಾಗಲಿದೆ. ಬಿಜೆಪಿಯ ಆಂತರಿಕ ವಿಚಾರಗಳೂ ಚರ್ಚೆಯಾಗಲಿವೆ." ಎಂದು ತಿಳಿಸಿದರು.

ಸಂಸತ್ ಎದುರು ಅದಾನಿ ವಿರುದ್ಧ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, "ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೇ ಅದಾನಿ ಜೊತೆ ವ್ಯವಹಾರ ಮಾಡಲಾಗಿದೆ. ಅದರ ಬಗ್ಗೆ ಕಾಂಗ್ರೆಸ್ ಮೊದಲು ಸ್ಪಷ್ಟೀಕರಣ ಕೊಡಲಿ. ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಲೆಂದೇ ಬೆಳಗಾವಿ ಅಧಿವೇಶನ ಮಾಡಲಾಗುತ್ತದೆ.‌ ಆ ರೀತಿ ನಡೆದುಕೊಳ್ಳುವ ಜವಾಬ್ದಾರಿ ಸರ್ಕಾರದ್ದು. ಆದರೆ ಕಾಂಗ್ರೆಸ್ ಸರ್ಕಾರ, ಉತ್ತರ ಕರ್ನಾಟಕ ನೀರಾವರಿ ಯೋಜನೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಉತ್ತರ ಕರ್ನಾಟಕ ಸಮಸ್ಯೆಗಳನ್ನು ಚರ್ಚಿಸುವ ನಿಟ್ಟಿನಲ್ಲಿ ಸದನ ಸಾಗಲಿ" ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯನ ಹಿಂದೆ ನಾನು ಬಂಡೆಯಾಗಿ ನಿಲ್ಲುತ್ತೇನೆ, ಈಗಲೂ ಇದ್ದೇನೆ, ಸಾಯುವವರೆಗೂ ಇರುತ್ತೇನೆ : ಡಿಸಿಎಂ ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.