ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಿರ್ವಹಿಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ ನಡೆಸಲ್ಪಡುವ ಕಲಬುರಗಿಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ವಶಾಸ್ತ್ರದ ಅಂತಾರಾಷ್ಟ್ರೀಯ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಹೊಸ ದಾಖಲೆಗಳು ಬಹಿರಂಗಪಡಿಸುತ್ತವೆ ಎಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸ್ಥಾಯಿ ಸಮಿತಿಯ ಸದಸ್ಯ, ಗೃಹ ವ್ಯವಹಾರಗಳ ಸಲಹಾ ಸಮಿತಿಯ ಸದಸ್ಯರೂ ಆಗಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಗಂಭೀರ ಆರೋಪ ಮಾಡಿದ್ದು, ತನಿಖೆಗೆ ಒಳಪಡುವಂತೆ ಖರ್ಗೆ ಕುಟುಂಬವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ದಾಖಲೆಗಳ ಪ್ರತಿಯೊಂದಿಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು,
ಸಿದ್ಧಾರ್ಥ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಖರ್ಗೆ ಅವರ ಪತ್ನಿ, ಅಳಿಯ ಮತ್ತು ಇಬ್ಬರು ಪುತ್ರರು ಸೇರಿದ್ದಾರೆ. ಪಾಲಿ ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ, ಖರ್ಗೆಯವರ ಅಳಿಯ ಮತ್ತು ಕಲಬುರಗಿ ಹಾಲಿ ಸಂಸದ. ಇತ್ತೀಚೆಗೆ, ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬೆಂಗಳೂರು ಸಮೀಪದ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಲಭ್ಯಗಳನ್ನು ನೀಡಿರುವುದು ಬೆಳಕಿಗೆ ಬಂದಿತ್ತು ಎಂದರು.
ಮಾರ್ಚ್ 2014ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 16 ಎಕರೆ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ಪಾಲಿ ಸಂಸ್ಥೆಗೆ ಗುತ್ತಿಗೆಗೆ ನೀಡಿತ್ತು. ಒಂದೆರಡು ವರ್ಷಗಳಲ್ಲಿ 16 ಎಕರೆ ಲೀಸ್ ಆಸ್ತಿಗೆ 3 ಎಕರೆ ಹೆಚ್ಚುವರಿ ಜಮೀನು ಸೇರ್ಪಡೆಯಾಯಿತು ಮತ್ತು ಅಂತಿಮವಾಗಿ, ಮಾರ್ಚ್ 2017 ರಲ್ಲಿ ಎಲ್ಲಾ 19 ಎಕರೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಖರ್ಗೆ ಕುಟುಂಬ ನಡೆಸುವ ಸಂಸ್ಥೆಗೆ ಉಚಿತವಾಗಿ ವರ್ಗಾಯಿಸಿತು. ಒಂದು ಪ್ರಮುಖ ಸಂಗತಿಯೆಂದರೆ ಖರ್ಗೆಯವರ ಮಗ ಪ್ರಿಯಾಂಕ್ ಖರ್ಗೆ ಅವರು ಭೂಮಿ ಮಂಜೂರು ಮಾಡಿದಾಗ ಅವರು ಈಗಿನಂತೆ ಆಗಿನ ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು ಎಂದು ಆರೋಪಿಸಿದ್ದಾರೆ.
New documents reveal that 19 acres of government land was given FREE to the International Institute of Pali, Sanskrit and Comparative Philosophy in Gulbarga, run by the Siddhartha Vihara Trust managed by the Shri Mallikarjuna Kharge family. Trustees of the Siddhartha trust.. 1/7 pic.twitter.com/l5bMkCvBXC
— Lahar Singh Siroya (@LaharSingh_MP) September 2, 2024
5 ಎಕರೆ ಕೆಐಎಡಿಬಿ ಭೂ ಮಂಜೂರಾತಿಯಂತೆ 19 ಎಕರೆ ಭೂಮಿ ಹಸ್ತಾಂತರವನ್ನು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ನಾನು ಒತ್ತಾಯಿಸುತ್ತೇನೆ. ಕರ್ನಾಟಕದಲ್ಲಿ ಖರ್ಗೆ ಕುಟುಂಬದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತವನ್ನು ಎತ್ತಿ ತೋರಿಸಿದ್ದಕ್ಕಾಗಿ ನನ್ನನ್ನು ನಿಂದಿಸಲಾಗಿದೆ ಮತ್ತು ವೈಯಕ್ತಿಕವಾಗಿ ಗುರಿಪಡಿಸಲಾಗಿದೆ. ಆದರೆ, ಖರ್ಗೆ ಕುಟುಂಬವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗವಾನ್ ಗೌತಮರ ತತ್ವಗಳಲ್ಲಿ ನಂಬಿಕೆ ಹೊಂದಿದ್ದರೆ, ಅವರೇ ತನಿಖೆಗೆ ಒಳಗಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೇಳಬೇಕಾದ ಇನ್ನೊಂದು ಸೂಕ್ತ ಪ್ರಶ್ನೆಯೆಂದರೆ, ಖಾಸಗಿ ಟ್ರಸ್ಟ್‌ಗೆ ಭೂಮಿಯನ್ನು ಮಂಜೂರು ಮಾಡಲು ಸಿದ್ದರಾಮಯ್ಯ ಸರ್ಕಾರವು ಖರ್ಗೆಯವರ ಒತ್ತಡಕ್ಕೆ ಮಣಿದಿದೆಯೇ ಅಥವಾ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಖರ್ಗೆ ಅವರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದೆಯೇ? ಎಂದು ಪ್ರಶ್ನಿಸಿದರು.
ಇನ್ನು ಲೆಹರ್ ಸಿಂಗ್ ಮಾಡಿರುವ ಟ್ವೀಟ್ ಅನ್ನು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೊಹನ್ ದಾಸ್ ಅಗರ್ವಾಲ್ ರೀ ಟ್ವೀಟ್ ಮಾಡಿ ತಮ್ಮ ವಾಲ್ನಲ್ಲಿ ಹಾಕಿಕೊಂಡು, ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಖರ್ಗೆ ಕುಟುಂಬದ ಟ್ರಸ್ಟ್‌ಗೆ ಸಿಎ ನಿವೇಶನ ಹಂಚಿಕೆ ಕೇಸ್; ಸರ್ಕಾರದಿಂದ ವಿವರಣೆ ಕೇಳಿದ ರಾಜ್ಯಪಾಲ - CA Site Allotment Case