ETV Bharat / state

ತಮ್ಮ ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ - D K Shivakumar

ಭಗವಂತನ ಕೃಪೆಯಿಂದ ಮತ್ತೆ ಮಳೆಯಾಗಿ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು, ಡ್ಯಾಂ ಮತ್ತೆ ಭರ್ತಿಯಾಗುವ ಸೂಚನೆ ಇದೆ. ಹೀಗಾಗಿ ಶೀಘ್ರದಲ್ಲೇ ನಾನು ಹಾಗೂ ಸಿಎಂ ಗಂಗಾಮಾತೆಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದರು. ಇದೇ ವೇಳೆ, ಬಿಜೆಪಿ ಪ್ರತಿಭಟನೆಯನ್ನು ಟೀಕಿಸಿದರು.

DCM D K Shivakumar
ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)
author img

By ETV Bharat Karnataka Team

Published : Aug 21, 2024, 4:49 PM IST

Updated : Aug 21, 2024, 5:30 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ (ETV Bharat)

ಬೆಂಗಳೂರು: "ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಗಳಿವೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮಗಳ ಬಿಜೆಪಿ ಪ್ರತಿಭಟನೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ, "ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?" ಎಂದು ಕುಟುಕಿದರು.

ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ: "ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್​ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ" ಎಂದರು.

"ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ. ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಅದಕ್ಕೆ ನಾಣು ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ" ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

"ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷತಾ ವರದಿಯನ್ನು ನೀಡಲಿದ್ದಾರೆ. ಆಲಮಟ್ಟಿ ತುಂಬಿ ತುಳುಕುತ್ತಿದೆ. ಮಂಡ್ಯ ಸೇರಿದಂತೆ ಇತರೆ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಉತ್ತಮ ಮಳೆಯಾಗಿ ತುಂಬವ ನಿರೀಕ್ಷೆ ಇದೆ" ಎಂದು ಹೇಳಿದರು.

ಕೊಪ್ಪಳದ ಬಸಾಪೂರದಲ್ಲಿರುವ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸುವ ಕುರಿತು ಇಡೀ ದೇಶವೇ ಎದುರು ನೋಡುತ್ತಿತ್ತು. ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಸಚಿವರು, ಅಧಿಕಾರಿಗಳ ನಿರಂತರ ಪ್ರಯತ್ನದಿಂದ ನಾಲ್ಕೇ ದಿನಗಳಲ್ಲಿ ಸರಿಪಡಿಸಿದ್ದೇವೆ. ಹೀಗಾಗಿ ವಿರೋಧ ಪಕ್ಷದವರ ಟೀಕೆಗಳು ಸತ್ತವು, ನಮ್ಮ ಕೆಲಸ ಉಳಿದವು" ಎಂದು ಹೇಳಿದರು.

ಸದ್ಯ ರಾಜ್ಯದಲ್ಲಿರುವ ಎಲ್ಲಾ ಜಲಾಶಯಗಳಿಗೆ ಭೇಟಿ ನೀಡಿ ಅವುಗಳ ವಸ್ತುಸ್ಥಿತಿ ಅಧ್ಯಯನ ಮಾಡಿ ವರದಿ ನೀಡಲು ತಾಂತ್ರಿಕ ಸಮಿತಿಗೆ ಸೂಚಿಸಲಾಗಿದೆ. ಅದಾದ ಬಳಿಕ ಯಾವ ಯಾವ ಡ್ಯಾಮ್​ನಲ್ಲಿ ಯಾವ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಯೋಚಿಸುತ್ತೇವೆ. ತುಂಗಭದ್ರಾ ಜಲಾಶಯದಲ್ಲಿ ಒಳ ಹರಿವು ಹೆಚ್ಚಿದ್ದು, ಭಗವಂತನ ಕೃಪೆಯಿಂದ ಮತ್ತೆ ಡ್ಯಾಂ ತುಂಬಲಿದೆ. ಈ ಭಾಗದ ರೈತರ ಬೆಳೆಗಳಿಗೆ ನೀರು ಸಿಗಲಿದೆ. ನಾವು ಕೂಡ ಗಂಗಾಮಾತೆಗೆ ಶೀಘ್ರದಲ್ಲಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸುತ್ತೇವೆ" ಎಂದರು.

ಇದನ್ನೂ ಓದಿ: ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಡಿ.ಕೆ.ಶಿವಕುಮಾರ್​ - DCM D K Shivakumar

Last Updated : Aug 21, 2024, 5:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.