ETV Bharat / state

ಹನುಮ ಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ: ಶಾಸಕ ರಾಮಮೂರ್ತಿ‌ ಸೇರಿ ಹಲವರು ವಶಕ್ಕೆ - ಬಿಜೆಪಿ ಪ್ರತಿಭಟನೆ

ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಕೆಳಕ್ಕಿಳಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
author img

By ETV Bharat Karnataka Team

Published : Jan 29, 2024, 12:35 PM IST

Updated : Jan 29, 2024, 2:52 PM IST

ಬೆಂಗಳೂರು : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆದಿದೆ. ಅದೇ ರೀತಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಅವಕಾಶ ನೀಡದೇ ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ಪಡೆದು ಪ್ರತಿಭಟನೆ ನಡೆಸುವಂತೆ ಪೊಲೀಸರು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ ಅವರಿಗೆ ಪ್ರತಿಭಟನೆಗೆ ಉದ್ದೇಶಿಸಿರುವ ಸ್ಥಳದಲ್ಲೇ ನೋಟೀಸ್ ನೀಡಿ ಸ್ಥಳದಿಂದ ನಿರ್ಗಮಿಸುವಂತೆ ಸೂಚಿಸಿದರು.

ಇದಕ್ಕೆ ಒಪ್ಪದ ಬಿಜೆಪಿ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಬೇರೆ ಪ್ರತಿಭಟನೆ ನಡೆಯುತ್ತಿದೆ, ಜಾಗ ಇಲ್ಲ ಎಂದರು. ಪೊಲೀಸ್ ನೋಟಿಸ್ ಮಧ್ಯೆಯೂ ಮೈಸೂರು ಬ್ಯಾಂಕ್ ವೃತ್ತದಲ್ಲೇ ಪ್ರತಿಭಟನೆಗೆ ಮುಂದಾದರು. ಈ ವೇಳೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಕೆ ರಾಮಮೂರ್ತಿ, ಕೆರಗೋಡಿನಲ್ಲಿ ಹನುಮ ಧ್ವಜಕ್ಕೆ ಅಪಮಾನ ಆಗಿದೆ. ಅದಕ್ಕಾಗಿ ಇಂದು ನಾವು ಹೋರಾಟ ಮಾಡುತ್ತಿದ್ದೇವೆ. ಶಾಸಕ ರವಿ ಗಾಣಿಗ ಪೊಲೀಸರಿಂದ ಲಾಠಿ ಚಾರ್ಜ್ ಮಾಡಿಸಿದ್ದಾರೆ. ಅದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳಿಗೆ ರಕ್ಷಣೆ ಇಲ್ಲ. ಹೋರಾಟ ಮಾಡುವವರ ಮೇಲೆ ಎಫ್ಐಆರ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಾಂಗ್ಲಾದೇಶದ ಮುಖ್ಯಮಂತ್ರಿಯಾ? ಪಾಕಿಸ್ತಾನದ ಮುಖ್ಯಮಂತ್ರಿಯಾ? ಎಂದು ಆಕ್ರೋಶ ಹೊರಹಾಕಿದರು.

ಡಿಸಿ ಕಚೇರಿಗೆ ಮನವಿ ಕೊಡಲು ಪೊಲೀಸರು ಬಿಡುತ್ತಿಲ್ಲ. ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮೊದಲು ರವಿ ಗಾಣಿಗರನ್ನು ಜೈಲಿಗೆ ಹಾಕಿ, ನಮ್ಮನ್ನಲ್ಲ. ನಾವೇ ರವಿ ಗಾಣಿಗ ವಿರುದ್ಧ ದೂರು ಕೊಡುತ್ತೇವೆ, ಎಫ್ಐಆರ್ ಹಾಕಲಿ ಎಂದು ಸಿ.ಕೆ ರಾಮಮೂರ್ತಿ ಆಗ್ರಹಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ನಿಗದಿಯಾಗಿದ್ದ ಪ್ರತಿಭಟನೆ ಅಶೋಕ್ ಆಗಮಿಸುವ ಮೊದಲೇ ಮುಗಿದು ಹೋಯಿತು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳದಿಂದ ಕರೆದೊಯ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ಇಲ್ಲದೆ ಪ್ರತಿಭಟನೆ ಮುಗಿಯಿತು.

ಪ್ರತಿಭಟನೆ ಮುಗಿದ ನಂತರ ಕೆಲ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಬಂದ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ನಿಂತು ಜೈ ಶ್ರೀರಾಮ್​ ಎನ್ನುತ್ತಾ ಸರ್ಕಾರದ ವಿರುದ್ಧ ಘೋಷಣೆ ಕೂಗ ತೊಡಗಿದರು. ಈ ವೇಳೆ ತಕ್ಷಣವೇ ಆಗಮಿಸಿದ ಪೊಲೀಸರು ಬೆಳ್ಳುಬ್ಬಿ, ಮತ್ತಿತರರನ್ನು ವಶಕ್ಕೆ ಪಡೆದು ಕರೆದೊಯ್ದರು.

ಇದನ್ನೂ ಓದಿ : ಹನುಮ ಧ್ವಜ ತೆರವು ವಿವಾದ: ಕೆರಗೋಡು ಗ್ರಾಮದಿಂದ ಬಿಜೆಪಿ ಬೃಹತ್​ ಪಾದಯಾತ್ರೆ

Last Updated : Jan 29, 2024, 2:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.