ETV Bharat / state

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಬಂಧನ - BJP YUVA MORCHA SECRETARY ARREST - BJP YUVA MORCHA SECRETARY ARREST

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ARUNKUGWE ARREST  SEXUAL HARASSMENT  PRETEXT OF GETTING MARRIED  SHIVAMOGGA
ಬಿಜೆಪಿ ಕಾರ್ಯದರ್ಶಿ ಬಂಧನ (ETV Bharat)
author img

By ETV Bharat Karnataka Team

Published : Jun 23, 2024, 6:40 PM IST

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅವರನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಗ್ವೆ ಸಾಗರದ ನಿವಾಸಿಯಾಗಿದ್ದಾರೆ.

ಅರುಣ್ ಕುಗ್ವೆ ಅವರು ನನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು. ಅಲ್ಲದೆ ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದ ಎರಡು ತಿಂಗಳ ಹಿಂದೆ ಅರುಣ್​ ತನ್ನನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದರಿಂದ ತನಗೆ ಮೋಸ ಆಗಿದೆ ಎಂದು ಸಂತ್ರಸ್ತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇನ್ನು ಇಬ್ಬರ ಮಧ್ಯೆ ರಾಜಿ ಪಂಚಾಯತಿ ನಡೆದಿತ್ತು. ಆದರೆ ಕಳೆದ ಎರಡು ದಿನದ ಹಿಂದೆ ನೊಂದ ಯುವತಿಯು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣೆಯ ಪಿಐ ಭರತ್ ಕುಮಾರ್ ಅವರು ಭಾನುವಾರ ಬೆಳಗ್ಗೆ ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಓದಿ: ಸೂರಜ್ ರೇವಣ್ಣ 'ಅಸಹಜ' ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ - Suraj Revanna Sexual Assault Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.